PMEGP Scheme : ನಿರುದ್ಯೋಗಿ ಯುವಕ, ಯುವತಿಯರಿಗೆ ಇಲ್ಲಿದೆ ಗುಡ್ ನ್ಯೂಸ್

ಉಡುಪಿ :  ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (PMEGP) ಯಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವ 18 ವರ್ಷ ಮೇಲ್ಪಟ್ಟ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಗರಿಷ್ಠ ಯೋಜನಾ ವೆಚ್ಚ ರೂ. 50.00 ಲಕ್ಷ ಮೊತ್ತದ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಗರಿಷ್ಠ ಯೋಜನಾ ವೆಚ್ಚ ರೂ. 20.00 ಲಕ್ಷ ಮೊತ್ತದ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸಲು ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ. 15 ರಿಂದ 35 ರ ವರೆಗೆ ಸಹಾಯಧನ ನೀಡಲಾಗುವುದು.

ಆಸಕ್ತರು ಎಲ್ಲಾ ದಾಖಲಾತಿಗಳೊಂದಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2575650, ಜಿಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574855, ರಾಜ್ಯ ನಿರ್ದೇಶಕರು, ಖಾದಿ ಗ್ರಾಮೋದ್ಯೋಗ ಆಯೋಗ, ದೂರವಾಣಿ ನಗರ, ವಿಜಿನಾಪುರ, ಬೆಂಗಳೂರು ದೂ.ಸಂಖ್ಯೆ: 080-25665885/ 080-25665883 ಹಾಗೂ ಪ್ರಾದೇಶಿಕ ಕಚೇರಿ, ಕಾಯರ್ ಬೋರ್ಡ್, ಪೀಣ್ಯಾ ಕೈಗಾರಿಕಾ ಪ್ರದೇಶ, ಟಿವಿಎಸ್ ಕ್ರಾಸ್ ಹತ್ತಿರ, ಬೆಂಗಳೂರು ದೂ.ಸಂಖ್ಯೆ: 080-28375023 ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read