KSRTC ನೇಮಕಾತಿ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗಾಗಲೇ ಕೆಲವೊಂದು ಪ್ರಕ್ರಿಯೆಗಳು ನಡೆದಿದ್ದು, ಅಭ್ಯರ್ಥಿಗಳ ಮೂಲ ದಾಖಲೆ ಮತ್ತು ದೇಹದಾರ್ಢ್ಯ ಪರೀಕ್ಷೆ ನಡೆಯಬೇಕಿತ್ತು.

ಮಾರ್ಚ್ ನಲ್ಲಿ ದಾಖಲಾತಿಗಳ ಪರಿಶೀಲನಾ ಕಾರ್ಯ ಆರಂಭವಾಗಿದ್ದರೂ ಸಹ ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಇದನ್ನು ಮುಂದೂಡಲಾಗಿದ್ದು, ಈಗ ರಾಜ್ಯದಲ್ಲಿ ಎರಡು ಹಂತದ ಮತದಾನ ಪೂರ್ಣಗೊಂಡಿರುವ ಕಾರಣ ಈ ಪ್ರಕ್ರಿಯೆಗೆ ಮತ್ತೆ ಚಾಲನೆ ನೀಡಲಾಗುತ್ತಿದೆ.

ಮೇ 15ರಿಂದ ಬೆಂಗಳೂರಿನ ಶಾಂತಿನಗರದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕಚೇರಿಯಲ್ಲಿ ಅಭ್ಯರ್ಥಿಗಳ ಮೂಲ ದಾಖಲೆ ಪರಿಶೀಲನೆ ಮತ್ತು ದೇಹದಾರ್ಢ್ಯ ಪರೀಕ್ಷೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್ ಸೈಟ್ ksrtcjobs.karnataka.gov.in ನಲ್ಲಿ ಕರೆ ಪತ್ರ ಡೌನ್ಲೋಡ್ ಮಾಡಿಕೊಂಡು ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಸರಿಯಾಗಿ ಹಾಜರಾಗಲು ಸೂಚನೆ ನೀಡಲಾಗಿದೆ.

ಅರ್ಹರಾದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ ನಡೆಸುವ ಕುರಿತಂತೆ ಪ್ರತ್ಯೇಕ ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಲಾಗುತ್ತಿದ್ದು, ಹುದ್ದೆಯ ಆಯ್ಕೆಯು, ಗಣಕೀಕೃತ ಚಾಲನಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಅರ್ಹತೆ ಮತ್ತು ಅಧಿ ಸೂಚನೆ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಮೀಸಲಾತಿ ನಿಯಮಗಳಿಗೆ ಅನುಗುಣವಾಗಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read