
ಬಿತ್ತನೆ ಬೀಜಕ್ಕೆ ಅರ್ಜಿ ಸಲ್ಲಿಸಲು ಇಚ್ಚಿಸುವ ಕಾಫಿ ಬೆಳೆಗಾರರು ಮಂಡಳಿಯ ಕಚೇರಿಯಲ್ಲಿ ದೊರೆಯುವ ಅರ್ಜಿ ಭರ್ತಿ ಮಾಡಿ, ಪ್ರತಿ ಕೆಜಿ ಬಿತ್ತನೆ ಬೀಜಕ್ಕೆ ರೂ.400 ಗಳನ್ನು ಮುಂಗಡವಾಗಿ ಪಾವತಿಸಿ ತಮ್ಮ ಹೆಸರನ್ನು ನೋಂದಾಯಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್, 10 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಹತ್ತಿರದ ಕಾಫಿ ಮಂಡಳಿಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಗೋಣಿಕೊಪ್ಪಲು ಕಾಫಿ ಮಂಡಳಿಯ ಉಪ ನಿರ್ದೇಶಕರು ತಿಳಿಸಿದ್ದಾರೆ.

