
ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ (ನೀರಾವರಿ), ಹೋಬಳಿ ಮಟ್ಟದ ಮಳೆಯಾಶ್ರಿತ ಬೆಳೆಗಳಾದ ರಾಗಿ, ನವಣೆ, ತೊಗರಿ, ಹುರುಳಿ, ಭತ್ತ ಮತ್ತು ನೀರಾವರಿ ಹಾಗೂ ಮಳೆಯಾಶ್ರಿತ ಬೆಳೆ ಸಜ್ಜೆ, ನೆಲಗಡಲೆ ಬೆಳೆಗಳು ಜಿಲ್ಲೆಯ ಬೆಳೆಗಳಾಗಿದ್ದು, ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆ ಮಾಡಿಸಬೇಕು.
ಮೇಲ್ಕಂಡ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಆಗಸ್ಟ್ 18 ಕೊನೆ ದಿನವಾಗಿರುತ್ತದೆ.
ನಿಗದಿಪಡಿಸಿದ ಅವಧಿಯೊಳಗೆ ರೈತರು ಬ್ಯಾಂಕುಗಳಲ್ಲಿ ಬೆಳೆ ವಿಮೆ ಮಾಡಿಸಿಕೊಳ್ಳಲು ತಿಳಿಸಿದ್ದು, ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್ಗಳು/ಸಾರ್ವಜನಿಕ ಸೇವಾ ಕೇಂದ್ರಗಳನ್ನು (Common Service Centers) ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು.
ಬೆಳೆ ಸಾಲ ಪಡೆದ ರೈತರು ಇಚ್ಛೆ ಪಡದೇ ಇದ್ದಲ್ಲಿ ತಮ್ಮ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೊಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮತ್ತು ದೂ.08392-276224 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

