HomeAgricultureಬಿತ್ತನೆ ಬೀಜ ಪಡೆಯುವ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಿತ್ತನೆ ಬೀಜ ಪಡೆಯುವ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅವಶ್ಯವಿರುವ ಬಿತ್ತನೆ ಬೀಜಗಳಾದ ತೊಗರಿ, ಸಜ್ಜೆ, ನವಣೆ, ಜೋಳ, ಮೆಕ್ಕೆಜೋಳ, ಶೇಂಗಾ ಮುಂತಾದ ಬಿತ್ತನೆ ಬೀಜಗಳು ದಾಸ್ತಾನೀಕರಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ರೈತರು ಸಹಾಯಧನದಡಿ ಬಿತ್ತನೆ ಬೀಜ ಪಡೆಯಲು ತಮ್ಮ ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ಪುಸ್ತಕ ಪ್ರತಿ, ಪಹಣಿ ಹಾಗೂ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.ರೈತರು ಖಾಸಗಿ ಮಳಿಗೆಯಲ್ಲಿ ಬಿತ್ತನೆ ಬೀಜ ಖರೀದಿಸಿದರೆ ಕಡ್ಡಾಯವಾಗಿ ರಶೀದಿಯನ್ನು ಪಡೆಯಬೇಕು. ಬಿತ್ತನೆ ಬೀಜಗಳನ್ನು ಬಿತ್ತುವ ಮುನ್ನ ಬೀಜೋಪಚಾರ ಮಾಡುವುದರಿಂದ ಮುಂದೆ ಸಂಭವಿಸಬಹುದಾದ ರೋಗ ಹಾಗೂ ಕೀಟಭಾದೆ ತಡೆಗಟ್ಟಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular