
ಲಸಿಕಾದಾರರು ರೈತರ/ಪಶು ಪಾಲಕರ ಮನೆಬಾಗಿಲಲ್ಲೇ ಕರುಗಳಿಗೆ ಕಿವಿಯೋಲೆ ಅಳವಡಿಸಿ ನೊಂದಣಿ ಮಾಡಿಕೊಂಡು ಲಸಿಕೆ ಹಾಕುತ್ತಾರೆ. ಎಲ್ಲಾ ರೈತರು ಮತ್ತು ಪಶುಪಾಲಕರು ತಮ್ಮಲ್ಲಿರುವ ಅರ್ಹ ಹೆಣ್ಣು ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕ ಡಾ|| ಶಿವಯೋಗಿ ಬಿ.ಯಲಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಂದು ರೋಗವು ಪ್ರಾಣಿಜನ್ಯವಾಗಿದ್ದು, ರಾಸುಗಳಲ್ಲಿ ಈ ರೋಗದಿಂದ ಗರ್ಭಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಹಾಕಬಹುದು. ಅವುಗಳ ಗರ್ಭಸ್ರಾವದಿಂದ ಮತ್ತು ಹಸಿ ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ ರೋಗವು ಮನುಷ್ಯರಿಗೂ ಹರಡಬಹುದು. ಈ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ. ಆದ್ದರಿಂದ ಅರ್ಹ ಕರುಗಳಿಗೆ ಲಸಿಕೆ ಹಾಕಿಸಿ, ಸಂಭವಿಸಬಹುದಾದ ಆರ್ಥಿಕ ನಷ್ಟ ತಪ್ಪಿಸಿ ನಿಮ್ಮ ಜಾನುವಾರುಗಳನ್ನು ರಕ್ಷಿಸಿಕೊಳ್ಳುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲೂಕುವಾರು/ಗ್ರಾಮವಾರು ತಯಾರಿಸಲಾಗಿದ್ದು, ಪಶುಪಾಲನಾ ಇಲಾಖೆಯ ಅಧಿಕಾರಿ / ಸಿಬ್ಬಂದಿಯನ್ನೊಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶುಚಿಕಿತ್ಸಾ ಸಂಸ್ಥೆಗಳನ್ನು ಸಂಪರ್ಕಿಸುವುದು.

