‘ಭದ್ರಾ’ ಮೇಲ್ದಂಡೆ ವ್ಯಾಪ್ತಿಯ ಸಾರ್ವಜನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮೊಗಸಾಲೆ ಅಂಕಣ: ಭದ್ರಾ ಮೇಲ್ದಂಡೆ: ರಾಜ್ಯದ ಮೊದಲ ಕೇಂದ್ರ ಯೋಜನೆ Vistara News

ಭದ್ರಾ ಮೇಲ್ದಂಡೆ ವ್ಯಾಪ್ತಿಯ ಸಾರ್ವಜನಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಡಿಸೆಂಬರ್ 29 ರಿಂದ ಕಾಲುವೆಗೆ ನೀರು ಹರಿಸಲಾಗುತ್ತಿದ್ದು, ಹೀಗಾಗಿ ಕಾಲುವೆ ವ್ಯಾಪ್ತಿಯ ಸಾರ್ವಜನಿಕರು ಎಚ್ಚರ ವಹಿಸಲು ಸೂಚಿಸಲಾಗಿದೆ.

ಶಾಂತಿಪುರ ಪಂಪ್ ಹೌಸ್ -1, ಜಂಬದ ಹಳ್ಳ, ತಾವರೆಕೆರೆ ಪಂಪ್ ಹೌಸ್ -2, ಅಜ್ಜಂಪುರ ಸುರಂಗದ ಮೂಲಕ ಹೆಬ್ಬೂರು ಗ್ರಾಮದ ಹತ್ತಿರದ ವೈ ಜಂಕ್ಷನ್ ಮುಖಾಂತರ ನೀರು ಹರಿಸಲಾಗುತ್ತದೆ ಎಂದು ಜಲಾಶಯದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಹೀಗಾಗಿ ಕಾಲುವೆ ಮತ್ತು ಹಳ್ಳದ ಪಾತ್ರಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅಡ್ಡಾಡದಂತೆ, ಜಾನುವಾರುಗಳನ್ನು ಕಾಲುವೆಗೆ ಬಿಡದಂತೆ ತಿಳಿಸಲಾಗಿದೆ. ಹಾಗೆಯೇ ಅನಧಿಕೃತವಾಗಿ ಪಂಪ್ಸೆಟ್ ಅಳವಡಿಸಿ ನೀರು ಮೇಲೆತ್ತುವುದನ್ನು ನಿಷೇಧಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read