ಕೆಪಿಸಿಎಲ್ – KSFC ನೇಮಕಾತಿಯ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (ಕೆ ಎಸ್ ಎಫ್ ಸಿ) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ನೇಮಕಾತಿ ಲಿಖಿತ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಪಡೆದ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪ್ರತಿ ತಪ್ಪು ಉತ್ತರಕ್ಕೆ 1/3 ರಷ್ಟು ನಕರಾತ್ಮಕ ಅಂಕ ಕಡಿತ ಮಾಡಲಾಗಿದೆ. ಈ ಕುರಿತು ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಮೇ 15ರ ಒಳಗೆ ಇ-ಮೇಲ್ kea2023exam@gmail.com ಮೂಲಕ ಕಳುಹಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಸಹಾಯಕ ಇಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ 622 ಹುದ್ದೆಗಳು ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ (ಕೆ ಎಸ್ ಎಫ್ ಸಿ) 41 ಹುದ್ದೆಗಳ ನೇಮಕಾತಿಗೆ ಈ ಲಿಖಿತ ಪರೀಕ್ಷೆ ನಡೆದಿತ್ತು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read