ಕರ್ನಾಟಕ ಮುಕ್ತ ವಿವಿ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2023-24 ನೇ ಶೈಕ್ಷಣಿಕ ಜುಲೈ ಸಾಲಿನಲ್ಲಿ ಯುಜಿಸಿಯ ಮಾನ್ಯತೆಯೊಂದಿಗೆ ದಿ: 01-07-2023 ರಿಂದ 31-08-2023 ರ ವರೆಗೆ ಪ್ರಥಮ ವರ್ಷದ ಸ್ನಾತಕ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕೋರ್ಸ್‍ಗಳಿಗೆ ಪ್ರವೇಶಾತಿ ನೀಡಲಾಗುತ್ತಿದೆ.

ಪ್ರಥಮ ವರ್ಷದ ಬಿಎ/ಬಿ.ಕಾಂ/ಬಿಬಿಎ/ಬಿಸಿಎ/ಬಿಎಸ್ಸಿ/ಬಿಎಸ್‍ಡಬ್ಲ್ಯು/ಬಿ.ಲಿಬ್ ಪದವಿ ಹಾಗೂ ಎಂ.ಎ/ಎಂ.ಕಾಂ/ಎಂಸಿಎ/ಎಂಎಸ್‍ಡಬ್ಲ್ಯು/ಎಂ.ಲಿಬ್ ಮತ್ತು ಎಂಎಸ್ಸಿ, ಎಂಬಿಎ ಸ್ನಾತಕೋತ್ತರ ಪದವಿ ಮತ್ತು ಪಿಜಿ ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‍ಗಳ ಪ್ರವೇಶಾತಿ ಆರಂಭವಾಗಿದ್ದು, ವಿದ್ಯಾರ್ಥಿಗಳು ಅರ್ಜಿಗಳನ್ನು ನೇರವಾಗಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ಭರ್ತಿ ಮಾಡಿ ಆಲ್ಕೊಳ ಸರ್ಕಲ್ ಹತ್ತಿರವಿರುವ ಕರಾಮುವಿ ಪ್ರಾದೇಶಿಕ ಕೇಂದ್ರ ಶಿವಮೊಗ್ಗ ಇಲ್ಲಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು.

ಮಹಿಳಾ ಬಿಪಿಎಲ್ ವಿದ್ಯಾರ್ಥಿನಿಯರಿಗೆ ಶೇ.15 ಶುಲ್ಕ ವಿನಾಯಿತಿ, ಆಟೋ ಹಾಗೂ ಕ್ಯಾಬ್ ಚಾಲಕರು ಹಾಗೂ ಅವರ ಮಕ್ಕಳಿಗೆ ಶೇ.30 ಶುಲ್ಕ ವಿನಾಯಿತಿ, ಡಿಫೆನ್ಸ್/ಎಕ್ಸ್ ಸರ್ವಿಸ್ ಮನ್‍ಗಳಿಗೆ ಶೇ.15, ಕೆಎಸ್‍ಆರ್‍ಟಿಸಿ ನೌಕರರಿಗೆ ಶೇ.25 ವಿನಾಯಿತಿ, ಕೋವಿಡ್‍ನಿಂದ ಮೃತರಾದ ಪೋಷಕರ ಮಕ್ಕಳಿಗೆ, ದೃಷ್ಟಿಹೀನ ಅಂಧ ಮಕ್ಕಳಿಗೆ ಮತ್ತು ತೃತೀಯ ಲಿಂಗಿಗಳಿಗೆ ಪ್ರವೇಶಾತಿಗೆ ಪೂರ್ಣ ಶುಲ್ಕ ವಿನಾಯಿತಿ ಇದೆ.

ವಿವಿಯ ಕಲಿಕಾರ್ಥಿ ಸಹಾಯಕೇಂದ್ರಗಳಾದ ಡಿವಿಎಸ್ ಕಾಲೇಜು ಶಿವಮೊಗ್ಗ, ಹೊಯ್ಸಳ ಕಾಲೇಜು ಸಾಗರ, ತುಂಗಾ ಕಾಲೇಜು ತೀರ್ಥಹಳ್ಳಿ, ಸಾಗರದ ಎಲ್‍ಬಿ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯಬಹುದಾಗಿದೆ ಎಂದು ಕರಾಮುವಿ ಪ್ರಾದೇಶಿಕ ಕೇಂದ್ರದ ಪ್ರಾದೇಶಕ ನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read