HomeKarnatakaJOB ALERT : ‘KPTCL’ ನಲ್ಲಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

JOB ALERT : ‘KPTCL’ ನಲ್ಲಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ‘ಆನ್ –ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿತ್ತು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) ಮತ್ತು ಎಸ್ಕಾಂಗಳಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇ -ಸಹಿ ಮಾಡಿ ಅಂಚೆ ಚಲನ್ ಪಡೆಯುವ ಮತ್ತು ಅರ್ಜಿ ಶುಲ್ಕ ಪಾವತಿಸುವ ದಿನಾಂಕವನ್ನು ಕ್ರಮವಾಗಿ ಡಿಸೆಂಬರ್ 5 ಮತ್ತು 10ರವರೆಗೆ ವಿಸ್ತರಿಸಲಾಗಿತ್ತು. ಈಗ ಮತ್ತೆ ಹೊಸ ಪರಿಷ್ಕೃತ ದಿನಾಂಕಗಳನ್ನು ಕೆಳಗಿನಂತೆ ನೀಡಲಾಗಿದೆ.

ಸೂಚನೆ : ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ನ.20 ಕ್ಕೆ ಕೊನೆಯ ದಿನಾಂಕ ಮುಗಿದಿದ್ದು, ಹೊಸದಾಗಿ ಅರ್ಜಿ ಸಲ್ಲಿಸಲು ಯಾವುದೇ ಅವಕಾಶ ಇರುವುದಿಲ್ಲ. ಚಲನ್ ಡೌನ್ಲೋಡ್, ಮಾಡಲು ಅರ್ಜಿ ಶುಲ್ಕ ಪಾವತಿಸಲು ಮಾತ್ರ ಕೊನೆಯ ದಿನಾಂಕ ವಿಸ್ತರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್ಲೈನ್ ಮೂಲಕ ಚಲನ್ ಡೌನ್ಲೋಡ್ ಮಾಡಲು ಅಂತಿಮ ದಿನಾಂಕ: 13-12-2024
ಅಂಚೆ ಕಚೇರಿಯ ಮೂಲಕ ಅರ್ಜಿ ಶುಲ್ಕ ಪಾವತಿಸಲು ಅಂತಿಮ ದಿನಾಂಕ: 18-12-2024

https://kptcl.karnataka.gov.in
https://bescom.karnataka.gov.in
https://cescmysore.karnataka.gov.in
https://mescom.karnataka.gov.in
https://hescom.karnataka.gov.in
https://gescom.karnataka.gov.in

ಹುದ್ದೆಗಳ ವರ್ಗೀಕರಣ, ಮೀಸಲಾತಿ ವಿವರ, ಕಲ್ಯಾಣ ಕರ್ನಾಟಕ ಪ್ರದೇಶ ಮೀಸಲಾತಿ, ವಯೋಮಿತಿ, ಅರ್ಹತೆ, ನೇಮಕಾತಿ ವಿಧಾನ, ಪರೀಕ್ಷಾ ವಿಧಾನ, ಅರ್ಜಿಯ ನಮೂನೆ ಮತ್ತು ಇತರೆ ವಿವರಗಳನ್ನು ಒಳಗೊಂಡ ವಿಸ್ತ್ರತ ಉದ್ಯೋಗ ಪ್ರಕಟಣೆಯನ್ನು ಮೇಲೆ ತಿಳಿಸಿರುವ ವೆಬ್ ಸೈಟ್ಗಳಲ್ಲಿ ಪ್ರಕಟಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular