ಪೋಷಕರೇ ಗಮನಿಸಿ : ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

ಬೆಂಗಳೂರು : ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(KREIS) ಅಡಿಯಲ್ಲಿನ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಡಿಸೆಂಬರ್‌ 2023 ಆಗಿದೆ.

ಅರ್ಜಿ ಸಲ್ಲಿಸುವ ವಿಧಾನ :

ಪೋಷಕರು ತಮ್ಮ ಮಕ್ಕಳ ಪರವಾಗಿ ನಿಮ್ಮ ಹತ್ತಿರದ KREIS ಅಧೀನದ ಯಾವುದೇ ಶಾಲಾ/ಕಾಲೇಜುಗಳ ಪ್ರಾಂಶುಪಾಲರ ಮೂಲಕ ಉಚಿತವಾಗಿ ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :

Student Achievement Tracking System (SATS) ಸಂಖ್ಯೆ

ಇತ್ತೀಚಿನ ಭಾವಚಿತ್ರ

ಮೀಸಲಾತಿ ಕೋರಿದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ವಿಶೇಷ ಪ್ರವರ್ಗಗಳಿಗೆ ಸಂಬಂಧಿಸಿದ ಪ್ರಮಾಣಪತ್ರಗಳು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪಟ್ಟಿ:

ಮೊರಾರ್ಜಿ ದೇಸಾಯಿ ವಸತಿ ಶಾಲೆ

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ

ಏಕಲವ್ಯ ಮಾದರಿ ವಸತಿ ಶಾಲೆ

ಶ್ರೀ ನಾರಾಯಣ ಗುರು ವಸತಿ ಶಾಲೆ

ಡಾ|| ಬಿ.ಆರ್ ಅಂಬೇಡ್ಕ‌ರ್ ವಸತಿ ಶಾಲೆ

ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ

ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ

ಒಟ್ಟು 807 ವಸತಿ ಶಾಲೆಗಳಲ್ಲಿ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಇದೇ ಡಿಸೆಂಬರ್ 31ರ ಒಳಗಾಗಿ ಹತ್ತಿರದ KREIS ವಸತಿ ಶಾಲೆಗಳಿಗೆ ತೆರಳಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24X7 ಸಹಾಯವಾಣಿ 9482300400

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read