HomeKarnatakaಜಲಾಶಯದ ಹಿನ್ನೀರಿನಲ್ಲಿ ಈಜಲು ಹೋಗಿದ್ದಾಗ ದುರಂತ: ಇಬ್ಬರು ಬಾಲಕರು ಸಾವು

ಜಲಾಶಯದ ಹಿನ್ನೀರಿನಲ್ಲಿ ಈಜಲು ಹೋಗಿದ್ದಾಗ ದುರಂತ: ಇಬ್ಬರು ಬಾಲಕರು ಸಾವು

ಬೆಳಗಾವಿ: ಈಜಲು ಹೋಗಿದ್ದ ಇಬ್ಬರು ಬಾಲಕರು ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಹಳೆ ಗುಡಗನಟ್ಟಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಈಜಲೆಂದು ಐವರು ಸ್ನೇಹಿತರು ಹೋಗಿದ್ದರು. ಐವರ ಪೈಕಿ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಬಾಲಕರನ್ನು 14 ವರ್ಷದ ಕೃಷ್ಣ ವಿಠಲ ಖಾನಾಪುರಿ ಹಾಗೂ ಪ್ರಜ್ವಲ್ ಮುತ್ತೆಪ್ತಾ ಗೋಕಾರ ಎಂದು ಗುರುತಿಸಲಾಗಿದೆ. ಮೃತ ಬಾಲಕರಿಬ್ಬರೂ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದವರು ಎಂದು ತಿಳಿದುಬಂದಿದೆ. ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular