HomeKarnatakaಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ: ಶಾಸಕರ ಹೆಸರಿನ ಜೊತೆ ವರದಿ ಕೇಳಿದ ಹೈಕಮಾಂಡ್!

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ: ಶಾಸಕರ ಹೆಸರಿನ ಜೊತೆ ವರದಿ ಕೇಳಿದ ಹೈಕಮಾಂಡ್!

ನಾಯಕತ್ವ ಬದಲಾವಣೆ ಚರ್ಚೆ, ಕರ್ನಾಟಕ ಬಜೆಟ್ 2026ರ ತಯಾರಿ ನಡುವೆಯೇ ಕರ್ನಾಟಕ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿಗಳ ಕಚೇರಿ ಈ ಪ್ರವಾಸಕ್ಕೆ ಒಪ್ಪಿಗೆ ನೀಡುವ ಮೊದಲೇ ಹೈಕಮಾಂಡ್ ನಾಯಕರ ಎಂಟ್ರಿಯಾಗಿದೆ.

ಕಾಂಗ್ರೆಸ್ ಶಾಸಕರದ್ದು ವೈಯಕ್ತಿಕ ಪ್ರವಾಸವೋ, ಸರ್ಕಾರದ ಹಣದಲ್ಲಿ ಪ್ರವಾಸ ಮಾಡುತ್ತಿದ್ದಾರೆಯೋ? ಎಂಬುದು ಇನ್ನೂ ಸಹ ಅಂತಿಮವಾಗಿಲ್ಲ. ಆದರೆ ಈ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದು, ವಿಮಾನ ಏರಲು ತಯಾರಾಗುತ್ತಿದ್ದ ಶಾಸಕರು ಈಗ ಕಾಯಬೇಕಿದೆ.

ಶಾಸಕರ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಪ್ರವಾಸದ ಕುರಿತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾಹಿತಿ ಕೇಳಿದ್ದಾರೆ. ಆದ್ದರಿಂದ ರಾಜ್ಯ ಘಟಕದಿಂದ ವರದಿ ಕಳಿಸುವ ತನಕ ಈ ಚರ್ಚೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರದಿ ಕೇಳಿದ್ದು ಏಕೆ?: ನಾಯಕತ್ವ ಬದಲಾವಣೆ ಚರ್ಚೆಗಳು ಬೆಂಗಳೂರಿನಿಂದ ದೆಹಲಿ ತನಕ ಜೋರಾಗಿ ಸಾಗುತ್ತಿರುವ ಹೊತ್ತಿನಲ್ಲಿ ಶಾಸಕರು ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಪ್ರವಾಸ ಹೊರಟಿದ್ದಾರೆ. ಇದು ರಾಜಕೀಯ ಪ್ರವಾಸವೇ?, ಬಣ ರಾಜಕೀಯವೇ? ಎಂಬುದು ಹೈಕಮಾಂಡ್ ಅನುಮಾನಕ್ಕೆ ಕಾರಣವಾಗಿದೆ.

ಆದ್ದರಿಂದ ಯಾವ-ಯಾವ ಶಾಸಕರು ವಿದೇಶ ಪ್ರವಾಸ ಮಾಡುತ್ತಿದ್ದಾರೆ?, ಅವರು ಯಾವ ಬಣದಲ್ಲಿ ಗುರುತಿಸಿಕೊಂಡಿದ್ದಾರೆ? ಸೇರಿದಂತೆ ವಿವರವಾದ ವರದಿಯನ್ನು ನೀಡಿ ಎಂದು ಹೈಕಮಾಂಡ್ ಕರ್ನಾಟಕ ಕಾಂಗ್ರೆಸ್‌ಗೆ ಸೂಚನೆ ನೀಡಿದೆ.

ಸದ್ಯದ ಮಾಹಿತಿ ಪ್ರಕಾರ 13 ಶಾಸಕರು ವಿದೇಶ ಪ್ರವಾಸಕ್ಕೆ ತಯಾರಾಗಿದ್ದಾರೆ. ಮಾಹಿತಿಯ ಪ್ರಕಾರ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ 13 ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರು ಇದೇ ಫೆಬ್ರವರಿ 18 ರಿಂದ ಮಾರ್ಚ್‌ 3ರವರೆಗೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ.

ಈ ಪ್ರವಾಸಕ್ಕೆ ಸರ್ಕಾರದಿಂದ ನಿರಾಕ್ಷೇಪಣಾ ಪತ್ರ ಸಿಕ್ಕಿದೆ. ಮುಖ್ಯಮಂತ್ರಿಗಳ ಕಚೇರಿ ಅನುಮತಿ ಬಾಕಿ ಇದೆ. ಆದರೆ ಈ ಪ್ರವಾಸದ ಕುರಿತು ಹಲವು ಶಾಸಕರಿಗೆ ತಿಳಿದಿಲ್ಲ. ಕೆಲವು ಶಾಸಕರು ತಾವು ಪ್ರವಾಸ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಶಾಸಕರ ವಿದೇಶ ಪ್ರವಾಸದ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಶಾಸಕರು, ವಿಧಾನ ಪರಿಷತ್‌ ಸದಸ್ಯರು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅವರ ದುಡ್ಡಲ್ಲಿ ಅವರು ಹೋದರೆ ತಪ್ಪೇನು?” ಎಂದು ಪ್ರಶ್ನೆ ಮಾಡಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular