ದಾವಣಗೆರೆ: ಮುಖ್ಯಮಂತ್ರಿ ಕುರ್ಚಿ ವಿಚಾರದಲ್ಲಿ ಹೈಕಮಾಂಡ್ ಮಧ್ಯ ಪ್ರವೇಶಿಸಬೇಕು ಎಂದು ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಮನವಿ ಮಾಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲವಾದರೂ ಈ ಬಗ್ಗೆ ಹೈಕಮಾಂಡ್ ಮಧ್ಯ ಪ್ರವೇಶಿಸಬೇಕು. ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಆಗಿ ಮುಂದುವರಿಸುತ್ತಾರಾ ಅಥವಾ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗುವುದೇ ಎಂಬುದನ್ನು ಹೈಕಮಾಂಡ್ ಖಡಾಖಂಡಿತವಾಗಿ ಒಂದು ಮಾತು ಹೇಳಿಬಿಡಲಿ. ಹೈಕಮಾಂಡ್ ಈ ಬಗ್ಗೆ ಸ್ಪಷ್ಟಪಡಿಸಬೇಕು ಎಂದು ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರನ್ನೇ ಐದು ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆಸುತ್ತಾರಾ? ಮುಂದಿನ ಐದು ವರ್ಷಕ್ಕೆ ಸೇರಿಸಿ ಮುಂದುವರಿಸುತ್ತಾರೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಅಥವಾ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿದರೂ ಸ್ವಾಗತಿಸುತ್ತೇವೆ. ಸಾಮಾನ್ಯ ಕಾರ್ಯಕರ್ತರನ್ನು ಮುಖ್ಯಮಂತ್ರಿ ಮಾಡಿದರೂ ಸ್ವಾಗತಿಸುತ್ತೇವೆ. ಆದರೆ ಸಿಎಂ ವಿಚಾರದಲ್ಲಿ ಹೈಕಮಾಂಡ್ ನಿಲುವು ಸ್ಪಷ್ಟಪಡಿಸಬೇಕು ಎಂಬುದು ನಮ್ಮ ಮನವಿಯಾಗಿದೆ ಎಂದು ಹೇಳಿದ್ದಾರೆ.

