
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮುಂದಿನ 5 ವರ್ಷ ನಾನೇ ಸಿಎಂ ಎಂಬ ಹೇಳಿಕೆಗೆ ಸ್ಪಷ್ಟನೆ ನೀಡಿದರು. ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಹೈಕಮಾಂಡ್ ಏನು ಹೇಳುತ್ತೋ ನಾನು ಅದನ್ನು ಕೇಳುತ್ತೇನೆ ಎಂದರು.
ಮುಖ್ಯಮಂತ್ರಿ ಬದಲಾವಣೆ ಕುರಿತಾಗಲಿ, ಡಾ.ಜಿ.ಪರಮೇಶ್ವರ್ ಅವರು ಭವಿಷ್ಯದಲ್ಲಿ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದರು. ನಮ್ಮದು ರಾಷ್ಟ್ರೀಯ ಪಕ್ಷ. ಏನೇ ತೀರ್ಮಾನ ಮಾಡಿದರೂ ಅದು ಹೈಕಮಾಂಡ್ ಮಟ್ಟದಲ್ಲೇ ಆಗಬೇಕು. ಹೊಸದಾಗಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಕುರಿತೂ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು.

