HomeKarnatakaಅತ್ಯಾಚಾರದಿಂದ ಗರ್ಭಿಣಿಯಾಗಿದ್ದ ಅಪ್ರಾಪ್ತೆ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರದಿಂದ ಗರ್ಭಿಣಿಯಾಗಿದ್ದ ಅಪ್ರಾಪ್ತೆ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ

ಬೆಂಗಳೂರು: ಅತ್ಯಾಚಾರದಿಂದ ಗರ್ಭಿಣಿಯಾಗಿದ್ದ 16 ವರ್ಷದ ಬಾಲಕಿಯ 27 ವಾರಗಳ ಭ್ರೂಣದ ವೈದ್ಯಕೀಯ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.

ಸಂತ್ರಸ್ತೆ ಪರವಾಗಿ ಆಕೆಯ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ನ್ಯಾಯಪೀಠ ವಾಣಿ ವಿಲಾಸ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ಅಭಿಪ್ರಾಯ ಪಡೆದುಕೊಂಡು ಗರ್ಭಪಾತಕ್ಕೆ ಅನುಮತಿ ನೀಡಿದೆ.

ಸರ್ಕಾರಿ ವೆಚ್ಚದಲ್ಲಿ ವೈದ್ಯಕೀಯ ಗರ್ಭಪಾತ ನಡೆಸಬೇಕು. ಅರ್ಜಿದಾರ ಅಪ್ರಾಪ್ತೆ ಜೀವಕ್ಕೆ ಹಾನಿ ಆಗುವಂತಿದ್ದರೆ ಅಂತಹ ಕಾರ್ಯವಿಧಾನ ಮುಂದುವರೆಸಬೇಕೇ? ಬೇಡವೇ ಎಂಬುದರ ಬಗ್ಗೆ ವೈದ್ಯರು ನಿರ್ಧಾರ ಕೈಗೊಳ್ಳಬಹುದಾಗಿದೆ. ಗರ್ಭಪಾತ ಮಾಡಿದರೆ ಭ್ರೂಣವನ್ನು ಡಿಎನ್ಎ ಪರೀಕ್ಷೆಗೆ ಬೆಂಗಳೂರಿನ ಕೇಂದ್ರ ವಿಧಿ ವಿಜ್ಞಾನ ಪ್ರಯೋಗಗಾಲಯಕ್ಕೆ ಕಳುಹಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕಿತ್ಸೆಗಾಗಿ ಸಂತ್ರಸ್ತೆ, ಮತ್ತವರ ಪೋಷಕರನ್ನು ಆಸ್ಪತ್ರೆಗೆ ಕರೆದೊಯ್ಯಲು, ಅಲ್ಲಿಂದ ಮನೆಗೆ ಕರೆದುಕೊಂಡು ಬರಲು, ಹೆಚ್ಚುವರಿ ಚಿಕಿತ್ಸೆಗಾಗಿ ಮತ್ತೊಂದು ಕಡೆ ಕರೆದುಕೊಂಡು ಹೋಗಲು ಸ್ಥಳೀಯ ಪೊಲೀಸ್ ಠಾಣೆಯಿಂದ ಉಚಿತವಾಗಿ ವಾಹನ ವ್ಯವಸ್ಥೆ ಮಾಡಬೇಕು. ಈ ಆದೇಶಕ್ಕೆ ಸಂಬಂಧಿಸಿದಂತೆ ಎರಡು ವಾರದೊಳಗೆ ವಸ್ತು ಸ್ಥಿತಿ ವರದಿ ಸಲ್ಲಿಸಬೇಕು ಎಂದು ತಿಳಿಸಿದೆ.

2025ರ ಜನವರಿ 16ರಂದು ಪೊಲೀಸರಿಗೆ ದೂರು ನೀಡಿದ್ದ ಸಂತ್ರಸ್ತೆಯ ತಾಯಿ ತನ್ನ 16 ವರ್ಷದ ಪುತ್ರಿಯ ಮೇಲೆ ಯುವಕನೊಬ್ಬ ಆರೇಳು ತಿಂಗಳಿಂದ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ ಎಂದು ತಿಳಿಸಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿ ಎಫ್ಐಆರ್ ದಾಖಲಿಸಿದ್ದರು. ಜನವರಿ 18ರಂದು ವೈದ್ಯಕೀಯ ತಪಾಸಣೆ ನಡೆಸಿದಾಗ ಬಾಲಕಿ 27 ವಾರದ ಗರ್ಭಿಣಿ ಆಗಿರುವುದು ಗೊತ್ತಾಗಿತ್ತು.

ಗರ್ಭಪಾತಕ್ಕೆ ಅನುಮತಿ ನೀಡುವಂತೆ ಕೋರಿ ಮಕ್ಕಳ ಕಲ್ಯಾಣ ಸಮಿತಿಗೆ ಸಂತ್ರಸ್ತೆ ಮತ್ತು ಆಕೆಯ ತಾಯಿ ಮನವಿ ಮಾಡಿದ್ದರು. ನಂತರ ತಾಯಿ ಮೂಲಕ ಅರ್ಜಿ ಸಲ್ಲಿಸಿ ವೈದ್ಯಕೀಯ ಗರ್ಭಪಾತಕ್ಕೆ ಅವಕಾಶ ಕಲ್ಪಿಸುವಂತೆ ಸಂತ್ರಸ್ತೆ ಹೈಕೋರ್ಟ್ ಗೆ ಮನವಿ ಮಾಡಿದ್ದರು. ಗರ್ಭಪಾತ ಮಾಡಲು ವೈದ್ಯಕೀಯ ಮಂಡಳಿ ರಚಿಸಲು ವಾಣಿವಿಲಾಸ ಆಸ್ಪತ್ರೆಗೆ ನಿರ್ದೇಶಿಸಬೇಕೆಂದು ಮನವಿ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಪೀಠ ವಾಣಿವಿಲಾಸ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಸೋಮವಾರದೊಳಗೆ ಸಂತ್ತಸ್ತೆಯ ತಪಾಸಣೆಗೆ ವೈದ್ಯಕೀಯ ಮಂಡಳಿ ರಚಿಸುವಂತೆ ತಿಳಿಸಿ ವೈದ್ಯರ ವರದಿಯ ಆಧಾರದಲ್ಲಿ ಗರ್ಭಪಾತಕ್ಕೆ ಆದೇಶ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular