HomeKarnatakaಜನನ -ಮರಣ ನೋಂದಣಿ ತಿದ್ದುಪಡಿ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್: ಎಸಿ ಬದಲು ಹಿಂದಿನಂತೆ ಜೆ.ಎಂ.ಎಫ್.ಸಿ. ಕೋರ್ಟ್...

ಜನನ -ಮರಣ ನೋಂದಣಿ ತಿದ್ದುಪಡಿ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್: ಎಸಿ ಬದಲು ಹಿಂದಿನಂತೆ ಜೆ.ಎಂ.ಎಫ್.ಸಿ. ಕೋರ್ಟ್ ವ್ಯಾಪ್ತಿಗೆ ವ್ಯಾಜ್ಯ ವಿಚಾರಣೆ

ಬೆಂಗಳೂರು: ಜನನ -ಮರಣ ನೋಂದಣಿ ತಿದ್ದುಪಡಿ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ರಾಜ್ಯ ಸರ್ಕಾರ ಉಪ ವಿಭಾಗಾಧಿಕಾರಿಗಳಿಗೆ ಜನನ, ಮರಣ ನೋಂದಣಿಗೆ ಸಂಬಂಧಿಸಿದ ವ್ಯಾಜ್ಯಗಳ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳುವ ಅಧಿಕಾರ ನೀಡಿತ್ತು.

ಇದಕ್ಕಾಗಿ ಕರ್ನಾಟಕ ಜನನ ಮರಣಗಳ ನೋಂದಣಿ ತಿದ್ದುಪಡಿ ಅಧಿನಿಯಮಗಳು -2022 ಜಾರಿಗೊಳಿಸಿದ್ದು, ಇದನ್ನು ಹೈಕೋರ್ಟ್ ರದ್ದುಪಡಿಸಿದೆ. ಬೀದರ್ ವಕೀಲರ ಸಂಘದ ಅಧ್ಯಕ್ಷ ಸುದರ್ಶನ ವಿ. ಬಿರಾದಾರ ಅವರು ಜನನ ಮರಣ ನೋಂದಣಿ ತಿದ್ದುಪಡಿ ನಿಯಮಗಳು ಜಾರಿಗೆ ಸಂಬಂಧಿಸಿದಂತೆ 2022ರ ಜುಲೈ 18ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸಬೇಕೆಂದು ಅರ್ಜಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಅರ್ಜಿಯನ್ನು ಪುರಸ್ಕರಿಸಿ ತಿದ್ದುಪಡಿ ಅಧಿಸೂಚನೆ ರದ್ದು ಮಾಡಿದೆ. ಹಿಂದಿನಂತೆಯೇ ಜನನ ಮರಣಗಳ ನೋಂದಣಿಗೆ ಸಂಬಂಧಿಸಿದ ವ್ಯಾಜ್ಯಗಳ ವಿಚಾರಣೆ ನಡೆಸಿ ತೀರ್ಮಾನಿಸುವ ಅಧಿಕಾರ ಜೆಎಮ್ಎಫ್ಸಿ ಕೋರ್ಟ್ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular