HomeKarnatakaಬೆಳಗಾವಿ ಮಹಿಳೆ ವಿವಸ್ತ್ರ ಕೇಸ್ ವಿಚಾರಣೆಗೆ ಒಂದು ವರ್ಷ ಕಾಲಮಿತಿ ನಿಗದಿ: ಹೈಕೋರ್ಟ್ ಆದೇಶ

ಬೆಳಗಾವಿ ಮಹಿಳೆ ವಿವಸ್ತ್ರ ಕೇಸ್ ವಿಚಾರಣೆಗೆ ಒಂದು ವರ್ಷ ಕಾಲಮಿತಿ ನಿಗದಿ: ಹೈಕೋರ್ಟ್ ಆದೇಶ

ಬೆಂಗಳೂರು: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿ, ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಒಂದು ವರ್ಷ ಕಾಲಮಿತಿ ನಿಗದಿಪಡಿಸಿ ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಸಂತ್ರಸ್ತೆಯ ಹಿತದೃಷ್ಟಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿ ಪ್ರತಿ ಎರಡು ತಿಂಗಳಿಗೊಮ್ಮೆ ಸಂತ್ರಸ್ತೆಯ ಮನೆಗೆ ಭೇಟಿ ನೀಡಬೇಕು. ಸಂತ್ರಸ್ತೆ ಮತ್ತು ಅವರ ಕುಟುಂಬ ಸದಸ್ಯರು ಜೀವನ ನಡೆಸಲು ಅಗತ್ಯ ಸೌಲಭ್ಯ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಈ ಸಂಬಂಧ ವರದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಬೇಕು. ಅವರು ಈ ಬಗ್ಗೆ ಮೇಲ್ವಿಚಾರಣೆ ನಡೆಸಬೇಕು ಎಂದು ತಿಳಿಸಿದ ನ್ಯಾಯಪೀಠ ಅರ್ಜಿಯನ್ನು ಇತ್ಯರ್ಥಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular