ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ಮುಂದಾಗಿರುವ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಮುಂದೂಡಿದೆ.
ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸಿಜೆ ಬಖ್ರು, ನ್ಯಾ.ಸಿ.ಎಂ.ಜೋಶಿ ಅವರ ಪೀಠ, ಅರ್ಜಿದಾರರು ಹಾಗೂ ಸರ್ಕಾರದ ಪರ ವಕೀಲರ ವಾದ-ಪ್ರತಿವಾದವನ್ನು ಆಲಿಸಿತು. ಇದೇ ವೇಳೆ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶ ಹೊರಡಿಸಿದೆ.
ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ರಾಜ್ಯ ಒಕ್ಕಲಿಗರಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ವೀರಶೈವ ಲಿಂಗಾಯಿತ ಮಹಾಸಭಾ ಸದಸ್ಯರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.