HomeKarnatakaBIG NEWS: ಸಿಎಂ ಸಿದ್ದರಾಮಯ್ಯಗೆ ಸಂಕಷ್ಟದ ಮೇಲೆ ಸಂಕಷ್ಟ: ಹೈಕೋರ್ಟ್ ನಲ್ಲಿ ಕೇವಿಯಟ್ ಸಲ್ಲಿಸಿದ ದೂರುದಾರ

BIG NEWS: ಸಿಎಂ ಸಿದ್ದರಾಮಯ್ಯಗೆ ಸಂಕಷ್ಟದ ಮೇಲೆ ಸಂಕಷ್ಟ: ಹೈಕೋರ್ಟ್ ನಲ್ಲಿ ಕೇವಿಯಟ್ ಸಲ್ಲಿಸಿದ ದೂರುದಾರ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿರುವ ಹೈಕೋರ್ಟ್ ಏಕಸದಸ್ಯ ಪೀಠ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪರ ವಕೀಲರು ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ.

ಈ ನಡುವೆ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಾದ ಕೇಳದೆಯೇ ಯಾವುದೇ ಆದೇಶವನ್ನು ಹೊರಡಿಸುವಂತಿಲ್ಲ ಎಂದು ಹೈಕೋರ್ಟ್ ನಲ್ಲಿ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡುವ ಅಥವಾ ಆದೇಶ ರದ್ದು ಮಾಡುವ ಅಥವಾ ಯಾವುದೇ ಆದೇಶ ನೀಡುವ ಮೊದಲು ಹೈಕೋರ್ಟ್ ಮೊದಲು ತಮ್ಮ ವಾದವನ್ನು ಸಂಪೂರ್ಣವಾಗಿ ಆಲಿಸಬೇಕು ಎಂದು ರಕ್ಷಣಾತ್ಮಕ ರೀತಿಯಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಕೇವಿಯೆಟ್ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular