ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್ ಗೆ ರಿಲೀಫ್

ಬೆಂಗಳೂರು: ಒಸಿಐ ಮಾಹಿತಿ ರದ್ದಾದ ಹಿನ್ನಲೆಯಲ್ಲಿ ಗಡಿಪಾರು ಭೀತಿಯಲ್ಲಿದ್ದ ಚೇತನ್ ಗೆ ಹೈಕೋರ್ಟ್ ರಿಲೀಫ್ ನೀಡಿದೆ.

ಚೇತನ್ ಗೆ ಹೈಕೋರ್ಟ್ ಷರತ್ತುಬದ್ಧ ರಿಲೀಫ್ ನೀಡಿದೆ. 2018 ರಲ್ಲಿ ಚೇತನ್ ಗೆ ಓವರ್ ಸಿಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನೀಡಲಾಗಿತ್ತು. ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ, ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ಅವರಿಗೆ ಕೇಂದ್ರ ಸರ್ಕಾರ ನೋಟಿಸ್ ನೀಡಿ ಉತ್ತರ ಪಡೆದಿತ್ತು. ಚೇತನ್ ನೀಡಿದ ಉತ್ತರ ಸಮಾಧಾನಕರವಾಗಿಲ್ಲದ ಹಿನ್ನೆಲೆ ಒಸಿಐ ಕಾರ್ಡನ್ನು ಕೇಂದ್ರ ಸರ್ಕಾರ ರದ್ದು ಪಡಿಸಿತ್ತು.

ಚೇತನ್ ವಾದ ಆಲಿಸದೇ ಕ್ರಮ ಸರಿಯಲ್ಲವೆಂದು ವಕೀಲರು ವಾದ ಮಂಡಿಸಿದ್ದರು. ಸರ್ಕಾರದ ಕ್ರಮವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದ್ದವು. ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಕ್ರಮಕ್ಕೆ ತಡೆ ನೀಡದಂತೆ ಎೆಜಿ ಅರುಣ್ ಶ್ಯಾಮ್, ಎ.ಎಸ್.ಜಿ. ಶಾಂತಿಭೂಷಣ್ ವಾದ ಮಂಡಿಸಿದ್ದರು.

ನಟ ಚೇತನ್ ಗೆ ಹೈಕೋರ್ಟ್ ಷರತ್ತು ಬದ್ಧ ರಿಲೀಫ್ ನೀಡಿದೆ. ನ್ಯಾಯಾಂಗದ ಬಗ್ಗೆ ನಟ ಚೇತನ್ ಟ್ವೀಟ್ ಮಾಡುವಂತಿಲ್ಲ. ವಿಚಾರಣೆಗೆ ಬಾಕಿ ಇರುವ ಕೇಸ್ ಗಳ ಬಗ್ಗೆ ಟ್ವೀಟ್ ಮಾಡುವಂತಿಲ್ಲ. ಜೂನ್ 2ರ ವರೆಗೆ ಅವರ ವಿರುದ್ಧ ಕ್ರಮ ಬೇಡ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಆದೇಶ ನೀಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read