HomeKarnatakaBIG NEWS: ಪುರಸಭೆ, ಪಾಲಿಕೆ ವ್ಯಾಪ್ತಿ ಕೃಷಿ ಜಮೀನುಗಳಿಗೆ ಪ್ರತ್ಯೇಕ ಭೂ ಪರಿವರ್ತನೆ ಅಗತ್ಯವಿಲ್ಲ: ಹೈಕೋರ್ಟ್...

BIG NEWS: ಪುರಸಭೆ, ಪಾಲಿಕೆ ವ್ಯಾಪ್ತಿ ಕೃಷಿ ಜಮೀನುಗಳಿಗೆ ಪ್ರತ್ಯೇಕ ಭೂ ಪರಿವರ್ತನೆ ಅಗತ್ಯವಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಪುರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕೃಷಿ ಜಮೀನುಗಳನ್ನು ವಾಣಿಜ್ಯ ಉದ್ದೇಶಗಳಿಗೆ ಪ್ರತ್ಯೇಕವಾಗಿ ಭೂ ಪರಿವರ್ತನೆ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟನೆ ನೀಡಿದೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲದ ಉದ್ಯಮಿ ಶ್ರೀಶೈಲ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕ ಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಸೆಕ್ಷನ್ 95 ರಿಂದ 97ರ ಪ್ರಕಾರ ಪುರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಜಮೀನುಗಳು ಕೃಷಿಯೇತರ ಚಟುವಟಿಕೆಗಳಿಗೆ ಒಳಪಡಲಿದೆ ಎಂದು ಹೇಳಲಾಗಿದೆ. ಹಾಗಾಗಿ, ಈ ವ್ಯಾಪ್ತಿಯ ಜಮೀನುಗಳನ್ನು ವಾಣಿಜ್ಯ ಉದ್ದೇಶಗಳಿಗೆ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ. ಮುಂದಿನ 60 ದಿನಗಳಲ್ಲಿ ಅರ್ಜಿದಾರರ ಆಸ್ತಿಗೆ ಸಂಬಂಧಿಸಿದಂತೆ ನಿಯಮಾನಸಾರ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡಲು ನ್ಯಾಯ ಪೀಠ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular