HomeKarnatakaಮಾನಹಾನಿ ಪ್ರಕರಣ ರದ್ದು ಕೋರಿ ಡಿ. ರೂಪಾ ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಎಂ....

ಮಾನಹಾನಿ ಪ್ರಕರಣ ರದ್ದು ಕೋರಿ ಡಿ. ರೂಪಾ ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಎಂ. ನಾಗಪ್ರಸನ್ನ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಮಾಡುವಂತೆ ಕೋರಿ ಡಿ. ರೂಪಾ ಮೌದ್ಗಿಲ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಮಾನನಷ್ಟ ಮೊಕದ್ದಮೆ ರದ್ದುಪಡಿಸುವಂತೆ ಅವರು ಮನವಿ ಮಾಡಿದ್ದು, ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಹಿಂದೆ ಸರಿದಿದ್ದಾರೆ. ಈ ಹಿಂದೆ ವಕೀಲರಾಗಿದ್ದಾಗ ರೋಹಿಣಿ ಸಿಂಧೂರಿ ಪರವಾಗಿ ವಕಾಲತ್ ಹಿನ್ನೆಲೆಯಲ್ಲಿ ಅರ್ಜಿಯನ್ನು ತಮ್ಮ ಪೀಠ ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಚಾರಣೆಯಿಂದ ತಾವು ಹಿಂದೆ ಸರಿಯುವುದಾಗಿ ನ್ಯಾಯಮೂರ್ತಿ ಸ್ಪಷ್ಟನೆ ನೀಡಿದ್ದು, ಮತ್ತೊಂದು ಪೀಠದ ಮುಂದೆ ಅರ್ಜಿ ವಿಚಾರಣೆ ನಿಗದಿಗೆ ರಿಜಿಸ್ಟ್ರಿಗೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular