HomeLatest Newsಪಹಲ್ಗಾಮ್ ದಾಳಿ ಖಂಡಿಸಿ ಏ. 28ರಂದು ಮೌನಾಚರಣೆ, ಶ್ರದ್ಧಾಂಜಲಿ ಸಲ್ಲಿಕೆಗೆ ಹೈಕೋರ್ಟ್ ನಿರ್ಧಾರ

ಪಹಲ್ಗಾಮ್ ದಾಳಿ ಖಂಡಿಸಿ ಏ. 28ರಂದು ಮೌನಾಚರಣೆ, ಶ್ರದ್ಧಾಂಜಲಿ ಸಲ್ಲಿಕೆಗೆ ಹೈಕೋರ್ಟ್ ನಿರ್ಧಾರ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಖಂಡಿಸಿ ಏಪ್ರಿಲ್ 28ರಂದು ಎರಡು ನಿಮಿಷ ಮೌನಾಚರಣೆಗೆ ಹೈಕೋರ್ಟ್ ನಿರ್ಧಾರ ಕೈಗೊಂಡಿದೆ.

ಅಂದು ಬೆಳಿಗ್ಗೆ 11 ಗಂಟೆಯಿಂದ 11 ಗಂಟೆ 2 ನಿಮಿಷದವರೆಗೆ ಮೌನಾಚರಣೆ ಮಾಡಲು ಹೈಕೋರ್ಟ್ ನಿರ್ಧಾರ ಕೈಗೊಂಡಿದೆ. ಹೈಕೋರ್ಟ್ ನ ಎಲ್ಲಾ ಪೀಠಗಳ ಅಧಿಕಾರಿ, ಸಿಬ್ಬಂದಿಯಿಂದ ಮೌನಾಚರಣೆ ನಡೆಯಲಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಸೂಚನೆಯ ಮೇರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆದೇಶಿಸಿದ್ದಾರೆ. ಮೌನಾಚರಣೆಯ ಮೂಲಕ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular