ಕೇಂದ್ರ ಸಚಿವ HDK ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ.

ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ಅವರು ಸಲ್ಲಿಸಿರುವ ಅರ್ಜಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯದ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿದೆ. ಕೆಲಕಾಲ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ನೀಡಿದ ಮಧ್ಯಂತರ ರಿಲೀಫ್ ವಿಸ್ತರಿಸಿ ಜನವರಿ 30ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಿದೆ.

ಈ ಎಫ್ಐಆರ್ ಆಧರಿಸಿ ಹಳೆಯ ನಿರೀಕ್ಷಣಾ ಜಾಮೀನು, ರದ್ದುಗೊಳಿಸುವಂತಿಲ್ಲ ಎಂದು ಈ ಹಿಂದೆ ನ್ಯಾಯಾಲಯ ನೀಡಿದ್ದ ನಿರ್ಬಂಧ ಆದೇಶವನ್ನು ಕೂಡ ಮುಂದುವರಿಸಲಾಗಿದೆ.

ನಿಯಮ ಉಲ್ಲಂಘಿಸಿ ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಎಡಿಜಿಪಿ ಚಂದ್ರಶೇಖರ್ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಹೆಚ್‍.ಡಿ. ಕುಮಾರಸ್ವಾಮಿ ಅವರು ಚಂದ್ರಶೇಖರ್ ವಿರುದ್ಧ ಅಕ್ರಮದ ಆರೋಪ ಮಾಡಿದ್ದರು. ಬಳಿಕ ಎಡಿಜೆಪಿ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read