HomeKarnataka81 ವರ್ಷದ ವೃದ್ಧ ಅಪರಾಧಿಗೆ ವಿಭಿನ್ನ ಶಿಕ್ಷೆ ನೀಡಿದ ಹೈಕೋರ್ಟ್

81 ವರ್ಷದ ವೃದ್ಧ ಅಪರಾಧಿಗೆ ವಿಭಿನ್ನ ಶಿಕ್ಷೆ ನೀಡಿದ ಹೈಕೋರ್ಟ್

ಬೆಂಗಳೂರು: 81 ವರ್ಷದ ವೃದ್ಧ ಅಪರಾಧಿಗೆ ಹೈಕೋರ್ಟ್ ವಿಭಿನ್ನ ಶಿಕ್ಷೆ ನೀಡಿದೆ. ಒಂದು ವರ್ಷ ಅಂಗನವಾಡಿಯಲ್ಲಿ ಸಂಬಳವಿಲ್ಲದೆ ಸೇವೆ ಸಲ್ಲಿಸಲು ಆದೇಶ ನೀಡಲಾಗಿದೆ.

ಎರಡು ವರ್ಷದ ಶಿಕ್ಷೆಯನ್ನು ಮೂರು ದಿನಕ್ಕೆ ಹೈಕೋರ್ಟ್ ಇಳಿಸಿದೆ. ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕ ಸದಸ್ಯ ಪೀಠ ಆದೇಶ ನೀಡಿದೆ. 2008ರಲ್ಲಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಐಯ್ತಪ್ಪ ನಾಯ್ಕ ಅವರಿಗೆ ಜಿಲ್ಲಾ ಕೋರ್ಟ್ ಎರಡು ವರ್ಷ ಶಿಕ್ಷೆ ವಿಧಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳಿಲ್ಲದ ವೃದ್ಧ ಪತ್ನಿಯನ್ನು ನೋಡಿಕೊಳ್ಳಬೇಕಿದೆ. ತಪ್ಪು ಒಪ್ಪಿಕೊಂಡು ಸಾಮುದಾಯಿಕ ಸೇವೆ ಸಲ್ಲಿಸಲು ಸಿದ್ಧರಿದ್ದಾರೆ. ಶಿಕ್ಷೆ ಕಡಿಮೆ ಮಾಡುವಂತೆ ವಕೀಲ ದಿನೇಶ್ ಕುಮಾರ್ ಕೆ. ರಾವ್ ಮನವಿ ಮಾಡಿದ್ದರು. 2023ರ ಫೆಬ್ರವರಿ 20 ರಿಂದ ಮಿತನಡ್ಕ ಅಂಗನವಾಡಿಯಲ್ಲಿ ಒಂದು ವರ್ಷ ಉಚಿತ ಸೇವೆ ಸಲ್ಲಿಸಲು ಹೈಕೋರ್ಟ್ ಆದೇಶ ನೀಡಿದೆ.

ಒಂದು ವರ್ಷ ಅಂಗನವಾಡಿಯಲ್ಲಿ ಸಂಬಳವಿಲ್ಲದೆ ಸೇವೆ ಸಲ್ಲಿಸಲು ಆದೇಶ ನೀಡಲಾಗಿದ್ದು, ಎರಡು ವರ್ಷದ ಶಿಕ್ಷೆಯನ್ನು ಮೂರು ದಿನಕ್ಕೆ ಇಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular