HomeKarnatakaBIG NEWS: 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ ಮರು ಪರಿಶೀಲನೆ, ವಾರದೊಳಗೆ ಆದೇಶ ಹೊರಡಿಸಲು...

BIG NEWS: 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ ಮರು ಪರಿಶೀಲನೆ, ವಾರದೊಳಗೆ ಆದೇಶ ಹೊರಡಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: 2026- 27ನೇ ಶೈಕ್ಷಣಿಕ ಶಾಲೆಗೆ ಒಂದನೇ ತರಗತಿಗೆ ದಾಖಲಾಗಲು ವಯೋಮಿತಿ ಸಡಿಲಿಕೆ ಆದೇಶವನ್ನು ಮರುಪರಿಶೀಲಿಸಿ ವಾರದೊಳಗೆ ಸೂಕ್ತ ಆದೇಶ ಹೊರಡಿಸುವಂತೆ ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಬೆಂಗಳೂರಿನ ಮಾಸ್ಟರ್ ಕೃಷ್ಣ ಗಣೇಶ್ ಸೇರಿದಂತೆ ಆರು ವಿದ್ಯಾರ್ಥಿಗಳ ಪರವಾಗಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಪೀಠ ಈ ಕುರಿತಾಗಿ ನಿರ್ದೇಶನ ನೀಡಿದೆ.

ವಯೋಮಿತಿ ವಿಚಾರದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ತೊಂದರೆ ಎದುರಿಸುತ್ತಿದ್ದಾರೆ. ಈ ಸಂಬಂಧ ಒಂದು ವಾರದೊಳಗೆ ಎಲ್ಲಾ ಆಯಾಮಗಳಲ್ಲೂ ಪರಿಶೀಲಿಸಿ ಆದೇಶ ಹೊರಡಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಯೋಮಿತಿ ನಿಗದಿಪಡಿಸಿ ಶಾಲಾ ಶಿಕ್ಷಣ ಇಲಾಖೆ ಮಾರ್ಚ್ 28ರಂದು ಆದೇಶ ಹೊರಡಿಸಿದೆ. ಅರ್ಜಿದಾರರು ಇನ್ನು ಆರು ವರ್ಷ ಪೂರ್ಣಗೊಳಿಸಿಲ್ಲ. ಆದರೆ 2025 -26 ನೇ ಸಾಲಿನ ಪೂರ್ವ ಪ್ರಾಥಮಿಕ ಶಿಕ್ಷಣ ಪೂರೈಸಿದ್ದಾರೆ. ಸರ್ಕಾರದ ಆದೇಶದಿಂದ ಸುಮಾರು 5 ಲಕ್ಷ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.

ಆ ವಿದ್ಯಾರ್ಥಿಗಳು ಮತ್ತೆ ಯುಕೆಜಿ ಅಧ್ಯಯನ ಮಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ವಯೋಮಿತಿ ಸಡಿಲಿಸಿ ಶಾಲಾ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಸರ್ಕಾರಿ ವಕೀಲರು, ನ್ಯಾಯ ಸಮ್ಮತ ಸಮಯ ನೀಡಿದಲ್ಲಿ ಅರ್ಜಿದಾರರು ಸಲ್ಲಿಸಿದ ವಯೋಮಿತಿ ಸಡಿಲಿಕೆ ಕೋರಿಕೆ ಪರಿಗಣಿಸಿ ಅಗತ್ಯ ಆದೇಶ ಹೊರಡಿಸಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಶಾಲಾ ಪ್ರವೇಶಕ್ಕೆ ಆರು ವರ್ಷ ಆಗಬೇಕಿತ್ತು. 5 ವರ್ಷ 8 ತಿಂಗಳಿಗೆ ಶಿಕ್ಷಣ ಇಲಾಖೆ ಇಳಿಸಿತ್ತು. ಇದನ್ನು 5 ವರ್ಷ 4 ತಿಂಗಳು ಮಾಡಲು ಅರ್ಜಿಯಲ್ಲಿ ಕೋರಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular