ಬೆಂಗಳೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಹೈಕೋರ್ಟ್ ಏಕಸದಸ್ಯ ಪೀಠ ಬೈಕ್ ಟ್ಯಾಕ್ಸಿಗೆ ನಿಷೇಧ ಹೇರಿತ್ತು, ಆದರೆ ವಿಭಾಗೀಯ ಪೀಠ ನಿಷೇಧ ತೆರವುಗೊಳಿಸಿದೆ. ಆದೇಶ ನೋಡಿಕೊಂಡು ಮುಂದಿನ ನಿರ್ಧಾರದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.ಈ ಕುರಿತು ರಿಟ್ ಅರ್ಜಿ ಸಲ್ಲಿಕೆಗೂ ಅವಕಾಶ ಇದೆ, ಕಾನೂನು ಸಲಹೆ ಪಡೆದುಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲಿದ್ದ ನಿಷೇಧವನ್ನು ರಾಜ್ಯ ಹೈಕೋರ್ಟ್ ರದ್ದುಗೊಳಿಸಿದೆ.ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠವು ಆದೇಶ ನೀಡಿದೆ.
ಈ ಹಿಂದೆ ಏಕಸದಸ್ಯ ಪೀಠವು ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧಿಸಿತ್ತು. ಇದರ ವಿರುದ್ಧ ರ್ಯಾಪಿಡೋ, ಉಬರ್ ಮತ್ತು ಓಲಾ ಸೇರಿದಂತಹ ಕಂಪನಿಗಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದವು. ವಿಚಾರಣೆಯ ನಂತರ ವಿಭಾಗೀಯ ಪೀಠವು ಸರ್ಕಾರದ ನಿಷೇಧ ಆದೇಶವನ್ನು ತೆರವುಗೊಳಿಸಿದೆ.

