HomeKarnatakaBIG NEWS: ಜಾತಿ ಗಣತಿ ವರದಿ ಬಗ್ಗೆ ಪ್ರಮಾಣ ಪತ್ರ ಸಲ್ಲಿಕೆಗೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

BIG NEWS: ಜಾತಿ ಗಣತಿ ವರದಿ ಬಗ್ಗೆ ಪ್ರಮಾಣ ಪತ್ರ ಸಲ್ಲಿಕೆಗೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿದ ಜಾತಿ ಜನಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿದೆಯೇ ಎಂಬುದರ ಬಗ್ಗೆ ಪ್ರಮಾಣ ಪತ್ರ ಮೂಲಕ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದಲ್ಲಿ ಜಾತಿ ಜನಗಣತಿ ಸಮೀಕ್ಷೆ ನಡೆಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ಶುಕ್ರವಾರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆದಿದೆ.

ವಿಚಾರಣೆ ನಡೆಸಿದ ನ್ಯಾಯಪೀಠ, ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿದೆಯೇ ಎಂಬುದರ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಲು ಸೂಚಿಸಿದೆ. ವಿಚಾರಣೆಯನ್ನು ಮಾರ್ಚ್ 5 ಕ್ಕೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಜಾತಿವಾರು ಸಮೀಕ್ಷೆ ನಡೆಸಲು ಅಧಿಕಾರವೇ ಇಲ್ಲ. ಆದರೂ ಸರ್ಕಾರ ಸಮೀಕ್ಷೆ ನಡೆಸಿದೆ. ಆ ವರದಿಯನ್ನು ಮುಖ್ಯಮಂತ್ರಿಗಳು ಸ್ವೀಕರಿಸಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ. ಆಗ ನ್ಯಾಯ ಪೀಠ ವರದಿ ಸ್ವೀಕರಿಸಿದ ಕುರಿತು ವಿವರಣೆ ನೀಡುವಂತೆ ಸೂಚಿಸಿ ಮಂಗಳವಾರಕ್ಕೆ ವಿಚಾರಣೆ ಮುಂದೂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular