BREAKING : ಉದ್ಯಮಿಗೆ 5 ಕೋಟಿ ವಂಚನೆ ಕೇಸ್ : ‘ಅಭಿನವ ಹಾಲಶ್ರೀ’ ಗೆ ಜಾಮೀನು ಮಂಜೂರು

ಬೆಂಗಳೂರು : ಉದ್ಯಮಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀಗೆ ಹೈಕೋರ್ಟ್ ಜಾಮೀನು ನೀಡಿದೆ.

ಹೈಕೋರ್ಟ್ ಏಕಸದಸ್ಯ ಪೀಠ ಅಭಿನವ ಹಾಲಶ್ರೀಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಉದ್ಯಮಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅಭಿನವ ಹಾಲಶ್ರೀ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದರು.

ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಎಂಬುವವರಿಗೆ ಚೈತ್ರಾ ಹಾಗೂ ಗ್ಯಾಂಗ್ ಬರೋಬ್ಬರಿ 5 ಕೋಟಿ ವಂಚಿಸಿತ್ತು. ಕಬಾಬ್ ಮಾರುವ ವ್ಯಕ್ತಿ, ಸಲೂನ್ ಮೇಕಪ್ ಮ್ಯಾನ್ ಹಾಗೂ ಇನ್ನೋರ್ವನಿಗೆ ಆರ್.ಎಸ್.ಎಸ್ ಮುಖಂಡನ ವೇಷ, ಬಿಜೆಪಿ ಕೇಂದ್ರ ನಾಯಕರ ವೇಷ ತೊಡಿಸಿ ನಾಟಕವಾಡಲು ರಂಗತಾಲೀಮು ನಡೆಸಿ ಉದ್ಯಮಿಯನ್ನು ವಂಚಿಸಿದ್ದರು. ಈ ಪ್ರಕರಣದಲ್ಲಿ ಹಾಲಶ್ರೀ ಸ್ವಾಮೀಜಿ ಎ3 ಆರೋಪಿಯಾಗಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read