‘PSI’ ಮರು ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು..?

ಬೆಂಗಳೂರು : PSI ಅಭ್ಯರ್ಥಿಗಳ ಮರು ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ ‘ಕರ್ನಾಟಕದ ಉಚ್ಚ ನ್ಯಾಯಾಲಯವು PSI ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹ. ಹಿಂದೆ ನಡೆದಿರುವ 545 ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಸಂಪೂರ್ಣ ರದ್ದುಗೊಳಿಸಲು ಆದೇಶಿಸಿ ಸ್ವತಂತ್ರ ಸಂಸ್ಥೆಯಿಂದ ಮತ್ತೆ ಮರುಪರೀಕ್ಷೆ ನಡೆಸಬೇಕು ಎಂದು ಆದೇಶಿಸಿರುವುದು ಹಿಂದಿನ ಬಿಜೆಪಿ ಸರ್ಕಾರದ ದುಷ್ಟ ಆಡಳಿತಕ್ಕೆ ಉಚ್ಚ ನ್ಯಾಯಾಲಯದ ಸಾಕ್ಷಿ ಮುದ್ರೆಯಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದೇ ಇಲ್ಲಾ ಎಂದು ಹಲವಾರು ಬಾರಿ ಸದನಕ್ಕೆ ವಾದಿಸಿದ್ದ ಹಿಂದಿನ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಾಗೂ ಪ್ರಕರಣವನ್ನು ಹಳ್ಳ ಹಿಡಿಸಲು ತನಿಖೆ ಮೇಲೆ ಪ್ರಭಾವ ಬೀರಿದ ಮತ್ತು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಿದ್ದ ಅಂದಿನ ಬಿಜೆಪಿ ಸಚಿವರಿಗೆ ಛೀಮಾರಿಗೆ ಹಾಕಿದಂತೆ. ಆಗಿರುವ ಅಕ್ರಮದ ಸಂಪೂರ್ಣ ಚಿತ್ರಣವನ್ನು ನ್ಯಾಯಲಯಕ್ಕೆ ಸಮರ್ಥವಾಗಿ ಮನವರಿಕೆ ಮಾಡಿಸಿ 56,000ಕ್ಕೂ ಹೆಚ್ಚು ಆಕಾಂಕ್ಷಿಗಳ ಪರವಾಗಿ ತೀರ್ಪು ಬರುವಂತೆ ಮಾಡಿರುವ ನಮ್ಮ ಸರ್ಕಾರದ ವಕೀಲರ ತಂಡಕ್ಕೂ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ.

ಈ ಗೆಲುವು ಬಿಜೆಪಿಯ ಭ್ರಷ್ಟ ಆಡಳಿತದ ವಿರುದ್ಧ ಸಿಡಿದೆದ್ದು ಸಂಘಟಿರಾಗಿ, ಪ್ರಕರಣವನ್ನು ಮುನ್ನಲೆಗೆ ತರಲು ಹೋರಾಡಿದ ಎಲ್ಲಾ ನ್ಯಾಯಯುತ ಪಿಎಸ್ಐ ಉದ್ಯೋಗ ಆಕಾಂಕ್ಷಿಗಳ ಗೆಲುವಾಗಿದೆ’ ಎಂದಿದ್ದಾರೆ.

https://twitter.com/PriyankKharge/status/1722944298335760883

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read