BIG NEWS: ಅ. 3 ರಿಂದ 10ರವರೆಗೆ ಹೈಕೋರ್ಟ್ ಗೆ ದಸರಾ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಅಕ್ಟೋಬರ್ 3ರಿಂದ 10ರವರೆಗೆ ದಸರಾ ರಜೆ ಇರಲಿದೆ. ಅ. 2ರಂದು ಗಾಂಧಿ ಜಯಂತಿ, ಅ. 11ರಂದು ಆಯುಧಪೂಜೆ, ಅ. 12ರಂದು ವಿಜಯದಶಮಿ, ಎರಡನೇ ಶನಿವಾರ, ಅ. 13 ಭಾನುವಾರ ರಜೆ ಇರುವುದರಿಂದ ಅಕ್ಟೋಬರ್ 14 ರಿಂದ ಕೋರ್ಟ್ ಕಲಾಪಗಳು ಪುನರಾರಂಭ ಆಗಲಿವೆ.

ಬೆಂಗಳೂರಿನ ಹೈಕೋರ್ಟ್ ಪ್ರಧಾನಪೀಠ, ಧಾರವಾಡ ಹಾಗೂ ಕಲಬುರಗಿ ಪೀಠಗಳಿಗೆ ದಸರಾ ರಜೆ ಅನ್ವಯವಾಗಲಿದೆ. ತುರ್ತು ಪ್ರಕರಣಗಳ ವಿಚಾರಣೆಗೆ ಅ. 4 ಮತ್ತು 9ರಂದು ಬೆಂಗಳೂರು, ಧಾರವಾಡ, ಕಲಬುರಗಿ ಪೀಠಗಳಲ್ಲಿ ತಲಾ ಒಂದು ವಿಭಾಗೀಯ ನ್ಯಾಯಪೀಠ ಹಾಗೂ ಎರಡು ಏಕಸದಸ್ಯ ನ್ಯಾಯಪೀಠಗಳು ಕಾರ್ಯ ನಿರ್ವಹಿಸಲಿದ್ದು, ಕಲಾಪ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read