HomeAutoBIG NEWS: HSRP ಅಳವಡಿಸದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್...

BIG NEWS: HSRP ಅಳವಡಿಸದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ವಿಸ್ತರಣೆ

ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಫ್ಲೈಟ್(HSRP) ಅಳವಡಿಸದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ಹೈಕೋರ್ಟ್ ಡಿಸೆಂಬರ್ 4ರ ವರೆಗೆ ವಿಸ್ತರಿಸಿದೆ.

ಈ ಸಂಬಂಧ ಸಲ್ಲಿಕೆಯಾದ ಮೇಲ್ಮನವಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ಈ ಕುರಿತು ಆದೇಶಿಸಿದೆ.

ಮೇಲ್ಮನವಿದಾರರ ಪರ ವಕೀಲ ಆದಿತ್ಯ ಸೋಂಧಿ ಅವರು, ರಾಜ್ಯ ಸರ್ಕಾರ ಮಧ್ಯಂತರ ಆದೇಶ ಚಾಲ್ತಿಯಲ್ಲಿರಿಸಿ ಏಕಸದಸ್ಯ ನ್ಯಾಯಪೀಠವೇ ಪ್ರಕರಣ ನಿರ್ಧರಿಸಬಹುದು ಎನ್ನುವ ಅಡ್ವೊಕೇಟ್ ಜನರಲ್ ಸಲಹೆ ಬಗ್ಗೆ ಪರಿಶೀಲಿಸಬೇಕೆಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಡ್ವೊಕೇಟ್ ಕೆ. ಶಶಿಕಿರಣ್ ಶೆಟ್ಟಿ ಅವರು, ಏಕ ಸದಸ್ಯ ನ್ಯಾಯ ಪೀಠದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದ್ದು, ಈಗಾಗಲೇ ಚಾಲ್ತಿಯಲ್ಲಿರುವ ಮಧ್ಯಂತರ ಆದೇಶ ಮುಂದುವರೆಯಲಿ. ಜೊತೆಗೆ ಏಕಸದಸ್ಯ ಪೀಠ ಪ್ರಕರಣ ನಿರ್ಧರಿಸಲು ಆದೇಶಿಸಬಹುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕೆ ಸಮ್ಮತಿ ನೀಡಿದ ನ್ಯಾಯಪೀಠ ಮಧ್ಯಂತರ ಆದೇಶ ವಿಸ್ತರಿಸಿ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ಮುಂದೂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular