HomeKarnatakaBIG NEWS: ಅಂಗನವಾಡಿ ಕಾರ್ಯಕರ್ತೆಯರಿಗೆ ಇಡುಗಂಟು ಹೆಚ್ಚಳ ಬಗ್ಗೆ 2 ತಿಂಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಿ:...

BIG NEWS: ಅಂಗನವಾಡಿ ಕಾರ್ಯಕರ್ತೆಯರಿಗೆ ಇಡುಗಂಟು ಹೆಚ್ಚಳ ಬಗ್ಗೆ 2 ತಿಂಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಇಡುಗಂಡು ಹೆಚ್ಚಿಸುವ ಬಗ್ಗೆ ಎರಡು ತಿಂಗಳಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ನಿರ್ದೇಶನ ನೀಡಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ನಿವೃತ್ತಿ ವೇಳೆ ನೀಡುವ ಇಡುಗಂಟನ್ನು 50 ಸಾವಿರದಿಂದ ಒಂದು ಲಕ್ಷ ರೂಪಾಯಿಗೆ ಹೆಚ್ಚಳ ಮಾಡುವಂತೆ ಕೋರಲಾಗಿತ್ತು. ಅದೇ ರೀತಿ ಸಹಾಯಕಿಯರಿಗೆ 30 ಸಾವಿರದಿಂದ 50 ಸಾವಿರ ರೂ.ಗೆ ಹೆಚ್ಚಳ ಮಾಡುವಂತೆ ಕೋರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಡವರೇ ಹೆಚ್ಚಾಗಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಕಡಿಮೆ ವೇತನ ಇದೆ. ಸಮಾಜದ ಕೆಳಸ್ತರದವರಿಗೆ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈ ಅಂಶವನ್ನೂ ಪರಿಗಣಿಸಿ ಸರ್ಕಾರ ತೀರ್ಮಾನಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ಸರ್ಕಾರಕ್ಕೆ ನ್ಯಾಯಮೂರ್ತಿ ಎನ್.ಎಸ್. ಸಂಜಯ ಗೌಡ ಅವರಿದ್ದ ಹೈಕೋರ್ಟ್ ಪೀಠ ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular