HomeAutoವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ

ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ

ಬೆಂಗಳೂರು: ವಾಹನಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಹಾಗೂ ಪ್ಯಾನಿಕ್ ಬಟನ್ ಅಳವಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಟ್ರ್ಯಾಕಿಂಗ್ ಸಿಸ್ಟಮ್ ಹಾಗೂ ಪ್ಯಾನಿಕ್ ಬಟನ್ ಅಳವಡಿಸದಿದ್ದರೆ ಫಿಟ್ನೆಸ್ ಸರ್ಟಿಫಿಕೇಟ್ ನವೀಕರಣ ಮಾಡದಂತೆ ನಿರ್ದೇಶಿಸಿ ರಾಜ್ಯ ಸಾರಿಗೆ ಇಲಾಖೆ ಹೊರಡಿಸಿದ ಆದೇಶ ಪ್ರಶ್ನಿಸಿ ಪ್ರವಾಸಿ ಟ್ಯಾಕ್ಸಿ ಮಾಲೀಕರ ಸಂಘ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನೋಟಿಸ್ ನೀಡಿದೆ.

ಅರ್ಜಿದಾರರ ಪರ ವಕೀಲ ಬಿ.ಆರ್. ಸುಂದರ್ ರಾಜ್ ಗುಪ್ತಾ ಅವರು ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದಿದ್ದರೆ ವಾಹನ ಓಡಿಸಲು ಸಾಧ್ಯವಾಗುವುದಿಲ್ಲ. ಸರ್ಕಾರದ ಸೂಚನೆಯಂತೆ ನವೆಂಬರ್ 30ಕ್ಕೆ ಗಡುವು ಮುಗಿಯಲಿದೆ. ಇದರಿಂದ ಟ್ಯಾಕ್ಸಿ ಮಾಲೀಕರು ಚಾಲಕರಿಗೆ ಕಷ್ಟವಾಗುತ್ತದೆ. ಕೆಎಸ್ಆರ್ಟಿಸಿ ಬಸ್ ಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಖಾಸಗಿ ವಾಹನಗಳಿಗೆ ವಿನಾಯಿತಿ ನೀಡಿಲ್ಲ. ಈ ಮೂಲಕ ತಾರತಮ್ಯ ಎಸಗಿದ್ದು, ಸರ್ಕಾರದ ಅಧಿಸೂಚನೆಗೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ವಿಚಾರಣೆ ಆಲಿಸಿದ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular