HomeLatest NewsBIG NEWS: ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ ವಿರೋಧಿಸಿ ವಕೀಲರಿಂದ ಪ್ರತಿಭಟನೆ

BIG NEWS: ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ ವಿರೋಧಿಸಿ ವಕೀಲರಿಂದ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ನಾಲ್ವರು ನ್ಯಾಯಮೂರ್ತಿಗಳನ್ನು ವರ್ಗಾಅವಣೆ ಮಾಡಿರುವುದನ್ನು ವಿರೋಧಿಸಿ ವಕೀಲರು ಪ್ರತಿಭಟನೆ ನಡೆಸಿದ್ದಾರೆ.

ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್, ಹೇಮಂತ್ ಚಂದನಗೌಡರ್, ಕೆ.ನಟರಾಜನ್ ಹಾಗೂ ಎಸ್.ಎಸ್.ಸಂಜಯ್ ಗೌಡ ಅವರ ವರ್ಗಾವಣೆಗೆ ವಿರೋಧಿಸಿ ಬೆಂಗಳೂರು ವಕೀಲರ ಸಂಘ, ಹೈಕೋರ್ಟ್ ನ ಎಲಾ ಹಿರಿಯ ಹಾಅಗೂ ಕಿರೀಯ ವಕೀಲರು ಪ್ರತಿಭಟನೆ ಆರಂಭಿಸಿದ್ದಾರೆ.

ಹೈಕೋರ್ಟ್ ನ ಗೋಲ್ಡನ್ ಗೇಟ್ ಮುಂಭಾಗ ನಮಗೆ ನ್ಯಾಯಬೇಕು ಎಂಬ ಘೋಷವಾಕ್ಯದೊಂದಿಗೆ ಧರಣಿ ನಡೆಸಿದ್ದಾರೆ. ಅಲ್ಲದೇ ವಕೀಲರು ಹೈಕೋರ್ಟ್ ಕಲಾಪದಿಂದ ಒಂದು ಗಂಟೆ ಕಾಲ ಹೊರಗುಳಿದು ಪ್ರತಿಭಟನೆ ನಡೆಸಿದ್ದು, ಹೈಕೋರ್ಟ್ ನ ನಾಲ್ವರು ನ್ಯಾಯಮೂರ್ತಿಗಳ ವರ್ಗಾವಣೆ ಆದೇಶ ಹಿಂಪಡೆಯುವಂತೆ ಒತ್ತಾಯಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular