ಬೆಂಗಳೂರು: ಮೊದಲ ಪತ್ನಿಗೆ ವಿಚ್ಛೇದನ ಆಗದೆ ಎರಡನೇ ಪತ್ನಿಗೆ ಜೀವನಾಂಶ ಸಿಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಮೊದಲ ಪತ್ನಿ ಜೊತೆಗಿನ ವಿವಾಹ ವಿಚ್ಛೇದನ ಆದೇಶಕ್ಕೆ ನ್ಯಾಯಾಲಯ ತಡೆ ನೀಡಿದ್ದ ಸಂದರ್ಭದಲ್ಲಿ ಎರಡನೇ ಪತ್ನಿಯು ಜೀವನಾಂಶ ಪಡೆಯುವ ಅರ್ಹತೆ ಹೊಂದಿಲ್ಲ ಎಂದು ಹೇಳಲಾಗಿದೆ.
ತಾನು ಎರಡನೇ ಪತ್ನಿಯಾಗಿದ್ದು ಪತಿಯಿಂದ ಜೀವನಾಂಶ ಕೊಡಿಸಲು ನಿರಾಕರಿಸಿರುವ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದು ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಬಿ. ಗೀತಾ ಅವರ ನ್ಯಾಯಪೀಠ ಈ ಆದೇಶ ನೀಡಿದೆ. ಅರ್ಜಿದಾರ ಮಹಿಳೆ ಪತಿ ಮೊದಲ ಪತ್ನಿಯ ವಿವಾಹ ವಿಚ್ಛೇದನ ಮಂಜೂರು ಮಾಡಿ ಕೌಟುಂಬಿಕ ನ್ಯಾಯಾಲಯ ಆದೇಶವನ್ನು ಹೈಕೋರ್ಟ್ ತಡೆ ಹಿಡಿದಿದೆ. ಇದರಿಂದ ಮೊದಲ ಮದುವೆ ಜಾರಿಯಲ್ಲಿರುತ್ತದೆ. ಮೊದಲ ಮದುವೆ ಚಾಲ್ತಿಯಲ್ಲಿರುವುದು ಅರ್ಜಿದಾರರಿಗೆ ತಿಳಿದಿತ್ತು. ಆದ್ದರಿಂದ ಮೊದಲ ಪತ್ನಿಯ ವಿವಾಹ ರದ್ದತಿಗೆ ತಡೆ ಆದೇಶವಿರುವಾಗ ಅರ್ಜಿದಾರೆಯನ್ನು ಕಾನೂನುಬದ್ಧ ಪತ್ನಿ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆಕೆಗೆ ಜೀವನಾಂಶ ಪಡೆಯುವ ಹಕ್ಕು ಇರುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಅರ್ಜಿದಾರ ಮಹಿಳೆಯ ಪತಿಗೆ ಮತ್ತೊಬ್ಬ ಮಹಿಳೆಯ ಜೊತೆ ಮೊದಲ ಮದುವೆಯಾಗಿತ್ತು. ಆ ಮದುವೆಯನ್ನು ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ಮಂಜೂರು ಮಾಡಿತ್ತು. ಈ ನಡುವೆ ಅರ್ಜಿದಾರ ಮಹಿಳೆ ಮತ್ತು ಅರ್ಜಿಯಲ್ಲಿನ ಪ್ರತಿವಾದಿ ಪ್ರತಿ ಮದುವೆಯಾಗಿದ್ದರು. ಈ ಮದುವೆಗೆ ಮೊದಲು ತನಗೆ ಈಗಾಗಲೇ ಮದುವೆಯಾಗಿದ್ದು, ಕೌಟುಂಬಿಕ ನ್ಯಾಯಾಲಯದಿಂದ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿದ್ದೇನೆ ಎಂದು ತಿಳಿಸಿ ಆದೇಶದ ಪ್ರತಿಕೂಡ ನೀಡಿದ್ದರು. ಅದನ್ನು ಪರಿಶೀಲಿಸಿದ್ದ ಅರ್ಜಿದಾರರ ಕುಟುಂಬದವರು ಎರಡನೇ ಮದುವೆಗೆ ಒಪ್ಪಿಕೊಂಡಿದ್ದರು. ನಂತರ ಅರ್ಜಿದಾರೆ ಪತಿ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಿ ಮದುವೆಯಾದ ಬಳಿಕ 8 ದಿನಗಳ ಕಾಲ ಪತಿ ಮನೆಯಲ್ಲಿದ್ದೆ. ತನ್ನನ್ನು ಮನೆಯಲ್ಲಿ ಕೂಡಿಹಾಕಿ ಹಿಂಸೆ ನೀಡಲಾಗಿದೆ. ಹೀಗಾಗಿ ಮನೆಯಿಂದ ಹೊರ ಬಂದಿದ್ದೇನೆ. ಜೀವನ ನಡೆಸಲು ಜೀವನಾಂಶ ಕೊಡಿಸಿ ಎಂದು ಅರ್ಜಿ ಸಲ್ಲಿಸಿದ್ದರು.
ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ: 2026-27ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲೆಯ ಆಸಕ್ತ ರೈತ /ರೈತ ಮಹಿಳೆಯರಿಂದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಚಟುವಟಿಕೆಯಲ್ಲಿ ಸಾಧನೆ ಮಾಡಿದವರು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.
ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ಪಡೆದು ದಿ:30/09/2026 ರ ಸಂಜೆ 5:30 ರೊಳಗೆ ಸಲ್ಲಿಸುವುದು.
ಅಗತ್ಯ ಮಾಹಿತಿಗಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಯವರನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

