ಬೇಡ ಜಂಗಮ ಪ್ರಮಾಣ ಪತ್ರ ಸಲ್ಲಿಸಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ರೇಣುಕಾಚಾರ್ಯ ಸೋದರನಿಗೆ ಹೈಕೋರ್ಟ್ ನಿರ್ಬಂಧ

ಬೆಂಗಳೂರು: ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಬೇಡ ಜಂಗಮ ಪ್ರಮಾಣ ಪತ್ರ ಸಲ್ಲಿಸಿ ಸ್ಪರ್ಧಿಸಿದ್ದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸಹೋದರ ಎಂ.ಪಿ. ದ್ವಾರಕೇಶ್ವರಯ್ಯ ಅವರಿಗೆ ಹೈಕೋರ್ಟ್ ನಿಂದ ಹಿನ್ನಡೆಯಾಗಿದೆ.

ಬೇಡ ಜಂಗಮ ಪ್ರಮಾಣ ಪತ್ರವನ್ನು ಬಳಕೆ ಮಾಡದಂತೆ ದ್ವಾರಕೇಶ್ವರಯ್ಯ ಅವರಿಗೆ ಹೈಕೋರ್ಟ್ ಸೋಮವಾರ ನಿರ್ಬಂಧ ವಿಧಿಸಿದೆ. ಪರಿಶಿಷ್ಟ ಜಾತಿ ಪಟ್ಟಿಗೆ ಸೇರುವ ಬೇಡ ಜಂಗಮ ಪ್ರಮಾಣ ಪತ್ರ ಸಲ್ಲಿಸಿ ಎಂ.ಪಿ. ದ್ವಾರಕೇಶ್ವರಯ್ಯ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದು, ಚುನಾವಣೆ ಅಧಿಕಾರಿಗಳಿಂದ ನಾಮಪತ್ರ ಅಂಗೀಕಾರಗೊಂಡಿತ್ತು.

ಈ ನಡುವೆ ದ್ವಾರಕೇಶ್ವರಯ್ಯ ಅವರ ಪಡೆದುಕೊಂಡಿರುವ ಬೇಡ ಜಂಗಮ ಪ್ರಮಾಣ ಪತ್ರ ರದ್ದು ಮಾಡಬೇಕೆಂದು ಕೋರಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಹಿಂದೆ ದ್ವಾರಕೇಶ್ವರಯ್ಯ ಬೆಂಗಳೂರು ಉತ್ತರ ತಹಶೀಲ್ದಾರ್ ಅವರಿಂದ ಪಡೆದ ಬೇಡ ಜಂಗಮ ಪ್ರಮಾಣ ಪತ್ರ ರದ್ದಾಗಿತ್ತು. ಹೊಸದಾಗಿ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಅವರಿಂದ ಪ್ರಮಾಣ ಪತ್ರ ಪಡೆದಿದ್ದು, ಅದನ್ನು ರದ್ದುಗೊಳಿಸಬೇಕೆಂದು ಕೋರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯವರೆಗೆ ಬೇಡ ಜಂಗಮ ಪ್ರಮಾಣ ಪತ್ರ ಬಳಕೆ ಮಾಡದಂತೆ ಪ್ರತಿವಾದಿ ದ್ವಾರಕೇಶಯ್ಯ ಅವರಿಗೆ ನಿರ್ಬಂಧ ವಿಧಿಸಿ ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read