HomeLatest NewsBIG NEWS: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

BIG NEWS: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಕೆ.ಆರ್.ಎಸ್ ಡ್ಯಾಂ ಬಳಿ ಡಿಸ್ನಿಲ್ಯಾಂಡ್ ಶೈಲಿಯ ಮನರಂಜನಾ ಪಾರ್ಕ್ ನಿರ್ಮಾಣ ಹಾಗೂ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಐಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಕೆ.ಆರ್.ಎಸ್ ಡ್ಯಾಂ ಬಳಿ ಡಿಸ್ನಿಲ್ಯಾಂಡ್ ಮಾದರಿಯ ಪಾರ್ಕ್ ಹಾಗೂ ಕಾವೇರಿ ಆರತಿ ನಿರ್ಮಾಣ ಕಾಮಗಾರಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ರಾಜ್ಯ ಸರ್ಕಾರಕ್ಕೆ ಹಾಗೂ ಕಾವೇರಿ ನಿಗಮಕ್ಕೆ ನೋಟಿಸ್ ಜಾರಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡ್ಯಾಂ ಬಳಿ 120 ಅಡಿಯ ಕಾವೇರಿ ವಿಗ್ರಹ ಸ್ಥಾಪಿಸಲಾಗುತ್ತಿದೆ. ಅದರ ಕಾಮಗಾರಿಗೆ ಯಂತ್ರಗಳನ್ನು ಉಪಯೋಗಿಸಲಾಗುತ್ತಿದೆ ಎಂಬ ಬಗ್ಗೆ ಫೋಟೋಗಳನ್ನು ಅರ್ಜಿಯಲ್ಲಿ ಸಲ್ಲಿಸಲಾಗಿದೆ. ಕಾಮಗಾರಿಗಾಗಿ ಅಗೆಯುವುದರಿಂದ ಡ್ಯಾಂ ಗೆ ಹಾನಿಯಾಗುವುದಿಲ್ಲವೇ? ಜಲಾಶಯದ ಸುರಕ್ಷತೆ ಸಮಿತಿಯ ಅನುಮತಿ ಯಾಕೆ ಪಡೆದುಕೊಂಡಿಲ್ಲ? ಕಾವೇರಿ ಪ್ರತಿಮೆ ಸ್ಥಾಪನೆಗೆ ಹಾಗೂ ಡ್ಯಾಂ ಬಳಿ ಪಾರ್ಕ್ ನಿರ್ಮಾಣ ಕಾಮಗಾರಿಗೆ ತಜ್ಞರ ಸಲಹೆ ಪಾಲಿಸಲಾಗಿದೆಯೇ? ಈ ಬಗ್ಗೆ ಎರಡು ವಾರಗಳಲ್ಲಿ ಉತ್ತರ ನೀಡುವಂತೆ ಹೈಕೋರ್ಟ್ ಸರ್ಕಾರಕ್ಕೆ ಹಾಗೂ ಕಾವೇರಿ ನಿಗಮಕ್ಕೆ ನೋಟಿಸ್ ಜಾರಿ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular