HomeLatest Newsಆಸ್ತಿ, ಅಧಿಕಾರ ದುರ್ಬಳಕೆ ಆರೋಪ: ಸಿರಿಗೆರೆ ತರಳಬಾಳು ಶ್ರೀಗೆ ಹೈಕೋರ್ಟ್ ನೋಟಿಸ್

ಆಸ್ತಿ, ಅಧಿಕಾರ ದುರ್ಬಳಕೆ ಆರೋಪ: ಸಿರಿಗೆರೆ ತರಳಬಾಳು ಶ್ರೀಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸಿರಿಗೆರೆ ತರಳಬಾಳು ಬ್ರಹನ್ಮಠದ ಆಸ್ತಿ ಮತ್ತು ಅಧಿಕಾರ ದುರ್ಬಳಕೆ, ಟ್ರಸ್ಟ್ ಡೀಡ್ ರದ್ದು ಸೇರಿ ಅನೇಕ ಆರೋಪಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಅಸಲು ದಾವೆಯಲ್ಲಿ ನೀಡಲಾದ ಮಧ್ಯಂತರ ಅರ್ಜಿಗಳ ಮೇಲಿನ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಹಿರೇಕೆರೂರಿನ ಎಸ್.ಎಸ್. ಪಾಟೀಲ್ ಸೇರಿದಂತೆ ಎಂಟು ಜನರು ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಏರೂರು ಅವರಿದ್ದ ಏಕ ಸದಸ್ಯ ನ್ಯಾಯಪೀಠದಲ್ಲಿ ಗುರುವಾರ ನಡೆಸಿ, ಈ ಕುರಿತಂತೆ ಆದೇಶಿಸಿದೆ. ಸಿರಿಗೆರೆ ತರಳಬಾಳು ಮಠದ ಪೀಠಾಧಿಪತಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಪ್ರಕರಣದ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular