HomeKarnatakaಪಕ್ಷದ ವಿಪ್ ಉಲ್ಲಂಘಿಸಿ ಅನರ್ಹಗೊಂಡರೂ ಚುನಾವಣೆಯಲ್ಲಿ ಸ್ಪರ್ಧೆಗೆ ಯಾವುದೇ ನಿರ್ಬಂಧ ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಪಕ್ಷದ ವಿಪ್ ಉಲ್ಲಂಘಿಸಿ ಅನರ್ಹಗೊಂಡರೂ ಚುನಾವಣೆಯಲ್ಲಿ ಸ್ಪರ್ಧೆಗೆ ಯಾವುದೇ ನಿರ್ಬಂಧ ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪಕ್ಷದ ವಿಪ್ ಉಲ್ಲಂಘನೆ ಮಾಡಿದರೂ ಮುಂಬರುವ ಚುನಾವಣೆ, ಉಪಚುನಾವಣೆಗಳಲ್ಲಿ ಸ್ಪರ್ಧಿಸಲು ಯಾವುದೇ ನಿರ್ಬಂಧ ಇಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.

ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಆರೋಪದಲ್ಲಿ ಅನರ್ಹಗೊಂಡ ಸ್ಥಳೀಯ ಸಂಸ್ಥೆಯ ಸದಸ್ಯರು ಮುಂಬರುವ ಚುನಾವಣೆ, ಉಪಚುನಾವಣೆಗಳಲ್ಲಿ ಸ್ಪರ್ಧಿಸಬಹುದು. ಅವರು ಸ್ಪರ್ಧಿಸಲು ಯಾವುದೇ ನಿರ್ಬಂಧ ಇಲ್ಲ ಎಂದು ಹೈಕೋರ್ಟ್ ಹೇಳಿದೆ.

ವಿಪ್ ಉಲ್ಲಂಘನೆ ಆರೋಪದ ಮೇರೆಗೆ ಅನರ್ಹಗೊಂಡಿದ್ದ ಚಿಂತಾಮಣಿ ನಗರಸಭೆ ಸದಸ್ಯ ಮೊಹಮ್ಮದ್ ಶಫಿಕ್ ನಾಮಪತ್ರ ಅಂಗೀಕರಿಸಿದ್ದ ಚುನಾವಣಾಧಿಕಾರಿ ಕ್ರಮ ಪ್ರಶ್ನಿಸಿ ಜಿಲ್ಲಾ ಜೆಡಿಎಸ್ ಮುಖಂಡ ಕೆ.ಎಂ. ಮುನೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular