HomeLatest Newsನಿಷೇಧದ ನಡುವೆಯೂ ಮಲಗುಂಡಿ ಸ್ವಚ್ಛತೆಗೆ ಮಾನವ ಬಳಕೆ: ಸಂಪೂರ್ಣ ಸ್ಥಗಿತಕ್ಕೆ ಹೈಕೋರ್ಟ್ ತಾಕೀತು

ನಿಷೇಧದ ನಡುವೆಯೂ ಮಲಗುಂಡಿ ಸ್ವಚ್ಛತೆಗೆ ಮಾನವ ಬಳಕೆ: ಸಂಪೂರ್ಣ ಸ್ಥಗಿತಕ್ಕೆ ಹೈಕೋರ್ಟ್ ತಾಕೀತು

ಬೆಂಗಳೂರು: ನಿಷೇಧದ ನಡುವೆಯೂ ಮಲಗುಂಡಿ ಸ್ವಚ್ಛತೆಗೆ ಮನುಷ್ಯರನ್ನು ಬಳಸುತ್ತಿರುವುದಕ್ಕೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಮಲಗುಂಡಿ ಸ್ವಚ್ಛತೆಗೆ ಮನುಷ್ಯರ ಬಳಕೆ ಸಂಪೂರ್ಣ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

ಆಧುನಿಕ ಯಂತ್ರೋಪಕರಣಗಳು ಇದ್ದರೂ ಮನುಷ್ಯರನ್ನು ಮಲಗುಂಡಿ ಸ್ವಚ್ಛತೆಗೆ ಬಳಕೆ ಮಾಡುತ್ತಿರುವ ಕ್ರಮ ಪ್ರಶ್ನಿಸಿ ಎಐಸಿಸಿಟಿಯು ಕರ್ನಾಟಕ ಘಟಕ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ರಾಮೇಶ್ವರರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ನ್ಯಾಯಪೀಠ ಸರ್ಕಾರಕ್ಕೆ ಮೌಖಿಕವಾಗಿ ತಾಕೀತು ಮಾಡಿದೆ.

ಕೆಲಕಾಲ ಅರ್ಜಿ ವಿಚಾರಣೆ ಆಲಿಸಿದ ನ್ಯಾಯಪೀಠ, ರಾಜ್ಯದಲ್ಲಿ ಒಳಚರಂಡಿ ಮತ್ತು ಸಂಸ್ಕರಣಾ ಘಟಕಗಳನ್ನು ಯಂತ್ರಗಳ ಮೂಲಕ ಸ್ವಚ್ಛಗೊಳಿಸಬೇಕು. ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಮನುಷ್ಯರಿಂದ ಮಲಗುಂಡಿಗಳ ಸ್ವಚ್ಛಗೊಳಿಸುವ ಅನಿಷ್ಟ ಪದ್ದತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು ಎಂದು ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಂತ್ರೋಪಕರಣಗಳ ಬಳಕೆಗೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ನೆಪವೊಡ್ಡಿ ಮನುಷ್ಯರನ್ನು ಬಳಸುವುದು ಸರಿಯಲ್ಲ. ಬಿಬಿಎಂಪಿ, ನಗರಾಭಿವೃದ್ಧಿ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಒಟ್ಟಾಗಿ ಸಮಸ್ಯೆಗೆ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ನ್ಯಾಯ ಪೀಠ ತಿಳಿಸಿದೆ. ಈ ಕುರಿತಾಗಿ ನಾಲ್ಕು ವಾರಗಳಲ್ಲಿ ಸಮಗ್ರ ಮಾಹಿತಿ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular