HomeLatest Newsರೆವಿನ್ಯೂ ಸೈಟ್ ಖರೀದಿ ವಹಿವಾಟು ನಿಯಂತ್ರಿಸಲು ಸಮಗ್ರ ಯೋಜನೆ ರೂಪಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ರೆವಿನ್ಯೂ ಸೈಟ್ ಖರೀದಿ ವಹಿವಾಟು ನಿಯಂತ್ರಿಸಲು ಸಮಗ್ರ ಯೋಜನೆ ರೂಪಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಯಾವುದೇ ಮಂಜೂರಾದ ಬಡಾವಣೆಗಳ ಭಾಗವಲ್ಲದ ಪರಿವರ್ತನೆಗೊಂಡ ಜಮೀನಿನಲ್ಲಿ ನಿವೇಶನ, ಭೂಮಿ ಖರೀದಿಗೆ ಸಂಬಂಧಿಸಿದ ವಹಿವಾಟುಗಳನ್ನು ನಿಯಂತ್ರಿಸಲು ಸಮಗ್ರ ಯೋಜನೆ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮಂಜೂರಾದ ನಕ್ಷೆಗಳ ಭಾಗವಲ್ಲದ ಪರಿವರ್ತಿತ ಭೂಮಿಯಲ್ಲಿ ಗ್ರಾಹಕರು ನಿವೇಶನ ಖರೀದಿ ಮಾಡುತ್ತಿರುವ ಪ್ರಕರಣ ಹೆಚ್ಚಾಗುತ್ತಿವೆ. ಇದರಿಂದ ಅಂತಹ ವಹಿವಾಟುಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಸಮಗ್ರ ಯೋಜನೆ ರೂಪಿಸುವ ಅವಶ್ಯಕತೆ ಇದೆ ಎಂದು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕ ಸದಸ್ಯ ಪೀಠ ಆದೇಶ ನೀಡಿದೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯ ನಂದಿಹಳ್ಳಿ ಗ್ರಾಮದ ಮಮತಾ ಅವರು ಸಲ್ಲಿಸಿದ್ದ ಅರ್ಜಿಯ ಪರಿಶೀಲನೆ ನಡೆಸಿದ ಹೈಕೋರ್ಟ್ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರ ಸೂಕ್ತ ಮಾರ್ಗಸೂಚಿ ಅಥವಾ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಕಾಯಿದೆ 1961ರ ಸೆಕ್ಷನ್ 17 (2ಬಿ) ಉದ್ದೇಶಕ್ಕೆ ಅನುಗುಣವಾಗಿ ಕ್ರಮಬದ್ಧಗೊಳಿಸುವ ಕಾರ್ಯ ವಿಧಾನವನ್ನು ರೂಪಿಸದ ಹೊರತು ವೈಯಕ್ತಿಕ ಪ್ರಕರಣಗಳಲ್ಲಿ ನ್ಯಾಯಾಲಯಗಳು ಶಾಸನಬದ್ಧ ಆದೇಶ ಮೀರಿ ಕಾನೂನಿಗೆ ವಿರುದ್ಧವಾದ ನಿರ್ದೇಶನ ನೀಡಲು ಸಾಧ್ಯವಿಲ್ಲ. ಅಂತಹ ವಹಿವಾಟು ನಿಯಂತ್ರಿಸಲು ಸಮಗ್ರ ಯೋಜನೆ ರೂಪಿಸಬೇಕು ಎಂದು ಹೈಕೋರ್ಟ್ ಹೇಳಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular