HomeKarnatakaಶೃಂಗೇರಿ ವಿಧಾನಸಭಾ ಚುನಾವಣೆ ಪೋಸ್ಟಲ್ ಬ್ಯಾಲೆಟ್ ಮತ ಮರುಪರಿಶೀಲಿಸಿ ಫಲಿತಾಂಶ ಪ್ರಕಟಿಸಲು ಹೈಕೋರ್ಟ್ ಆದೇಶ

ಶೃಂಗೇರಿ ವಿಧಾನಸಭಾ ಚುನಾವಣೆ ಪೋಸ್ಟಲ್ ಬ್ಯಾಲೆಟ್ ಮತ ಮರುಪರಿಶೀಲಿಸಿ ಫಲಿತಾಂಶ ಪ್ರಕಟಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಶೃಂಗೇರಿ ವಿಧಾನಸಭಾ ಚುನಾವಣೆಯ ಪೋಸ್ಟಲ್ ಬ್ಯಾಲೆಟ್ ಮತ ಮರು ಪರಿಶೀಲಿಸಿ ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಆದೇಶಿಸಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಮತದಾನವಾಗಿರುವ ಒಟ್ಟು ಪೋಸ್ಟಲ್ ಬ್ಯಾಲೆಟ್ ನಲ್ಲಿ ತಿರಸ್ಕೃತಗೊಂಡ 279 ಮತಗಳನ್ನು ಮರುಪರಿಶೀಲನೆ ನಡೆಸಿ ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶಸಿದೆ.

ಶೃಂಗೇರಿ ಕ್ಷೇತ್ರದಿಂದ ಜಯಗಳಿಸಿದ ಶಾಸಕ ಟಿ.ಡಿ. ರಾಜೇಗೌಡ ಅವರ ಆಯ್ಕೆ ಅಸಿಂಧು ಎಂದು ಘೋಷಣೆ ಮಾಡುವಂತೆ ಪರಾಜಿತ ಅಭ್ಯರ್ಥಿ ಡಿ.ಎನ್. ಜೀವರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಮುಂದಿನ ಎರಡು ವಾರಗಳಲ್ಲಿ ತಿರಸ್ಕೃತ 279 ಪೋಸ್ಟಲ್ ಬ್ಯಾಲೆಟ್ ಮತಗಳ ಮರುಪರಿಶೀಲನೆ ನಡೆಸಬೇಕು. ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ತಿರಸ್ಕೃತ ಮತಗಳ ಮರುಪರಿಶೀಲನೆ ಸಂದರ್ಭದಲ್ಲಿ ಅರ್ಜಿದಾರರು ಮತ್ತು ಪ್ರತಿವಾದಿ ಅವರಿಗೆ ಹಂಚಿಕೆಯಾಗಿರುವ ಮತಗಳಲ್ಲಿ ಯಾವುದೇ ಗಣನೀಯ ಲೋಪ ಕಂಡು ಬಂದಲ್ಲಿ ಎಲ್ಲಾ ಪೋಸ್ಟಲ್ ಬ್ಯಾಲೆಟ್ ಗಳ ಮತಗಳನ್ನು ಮರು ಎಣಿಕೆ ಮಾಡಿ ಹೊಸದಾಗಿ ಫಲಿತಾಂಶ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದೇಶದ ಪ್ರತಿಯನ್ನು ಕೇಂದ್ರ ಚುನಾವಣಾ ಆಯೋಗದ ಕಾರ್ಯದರ್ಶಿ, ಜಿಲ್ಲಾ ಮುಖ್ಯ ಚುನಾವಣಾ ಅಧಿಕಾರಿಗಳು ಮತ್ತು ಶೃಂಗೇರಿ ಚುನಾವಣಾ ಅಧಿಕಾರಿಗಳಿಗೆ ರವಾನಿಸುವಂತೆ ಸೂಚನೆ ನೀಡಲಾಗಿದೆ. ಆದೇಶಕ್ಕೆ ತಡೆ ನೀಡುವಂತೆ ಶಾಸಕ ರಾಜೇಗೌಡ ಪರ ವಕೀಲರು ಮನವಿ ಮಾಡಿದ್ದು, ಇದಕ್ಕೆ ನ್ಯಾಯಪೀಠ ಚುನಾವಣೆ ಫಲಿತಾಂಶವನ್ನು ರದ್ದುಗೊಳಿಸಿಲ್ಲ ಎಂದಿದ್ದು ಈ ಆದೇಶಕ್ಕೆ ಎರಡು ವಾರ ಕಾಲ ತಡೆ ನೀಡಿ ಆದೇಶಿಸಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿ.ಡಿ. ರಾಜೇಗೌಡ 201 ಮತಗಳಿಂದ ಜಯಗಳಿಸಿದ್ದರು. ಪೋಸ್ಟಲ್ ಬ್ಯಾಲೆಟ್ ನಲ್ಲಿ 1811 ಮತದಾನ ನಡೆದಿದ್ದು, ಈ ಮತಗಳಲ್ಲಿ 279 ಮತ ತಿರಸ್ಕರಿಸಲಾಗಿತ್ತು. ಪೋಸ್ಟಲ್ ಬ್ಯಾಲೆಟ್ ನಲ್ಲಿ ಬಂದಿದ್ದ ಮತಗಳ ಮರುಪರಿಶೀಲನೆಗೆ ಪರಾಜಿತ ಅಭ್ಯರ್ಥಿ ಜೀವರಾಜ್ ಸಲ್ಲಿಸಿದ್ದ ಮನವಿಯನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಮತ ಎಣಿಕೆ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ನಿಯಮದ ಪ್ರಕಾರ, ಪೋಸ್ಟಲ್ ಬ್ಯಾಲೆಟ್ ಮತಗಳಲ್ಲಿ ಕಡಿಮೆ ಅಂತರ ಇದ್ದಲ್ಲಿ ಮರು ಎಣಿಕೆ ನಡೆಸುವುದು ಕಡ್ಡಾಯವಾಗಿದೆ. ಆದರೆ, ಚುನಾವಣಾ ಅಧಿಕಾರಿಗಳು ಅದಕ್ಕೆ ಮುಂದಾಗಿಲ್ಲ. ಯಾವ ಕಾರಣಕ್ಕೆ ಮತ ತಿರಸ್ಕೃತಗೊಂಡಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿಲ್ಲ. ಹೀಗಾಗಿ ಫಲಿತಾಂಶ ಅಸಿಂಧು ಎಂದು ಘೋಷಣೆ ಮಾಡಿ ಮರುಮತ ಎಣಿಕೆಗೆ ಆದೇಶ ನೀಡಬೇಕೆಂದು ಅರ್ಜಿದಾರರು ಕೋರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular