HomeKarnatakaBIG NEWS: ಸಹಕಾರ ಸಂಘದ ಕಾಯ್ದೆ ತಿದ್ದುಪಡಿ ಅಸಂವಿಧಾನಿಕ: ಹೈಕೋರ್ಟ್ ಮಹತ್ವದ ತೀರ್ಪು

BIG NEWS: ಸಹಕಾರ ಸಂಘದ ಕಾಯ್ದೆ ತಿದ್ದುಪಡಿ ಅಸಂವಿಧಾನಿಕ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ -2023 ಸೆಕ್ಷನ್ 128ಎ ಗೆ ತಿದ್ದುಪಡಿ ತಂದಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ರದ್ದುಪಡಿಸಿದೆ.

ಸಹಕಾರ ಸಂಘಗಳಲ್ಲಿ ನೌಕರರ ನೇಮಕಾತಿ, ವರ್ಗಾವಣೆ ಹಾಗೂ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸಹಕಾರ ಸಂಘಗಳು ಹೊಂದಿದ್ದ ಅಧಿಕಾರವನ್ನು ಮೊಟಕುಗೊಳಿಸಿ ರಾಜ್ಯ ಸರ್ಕಾರ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128 ಎ ಗೆ ತಿದ್ದುಪಡಿ ತಂದಿರುವುದು ಅಸಂವಿಧಾನಿಕ ಎಂದು ಘೋಷಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಸಹಕಾರ ಸಂಘಗಳ ಸಿಬ್ಬಂದಿಯ ನೇಮಕ, ವರ್ಗಾವಣೆ, ಶಿಸ್ತು ಕ್ರಮದ ಅಧಿಕಾರವನ್ನು ಸರ್ಕಾರ ತೆಗೆದುಕೊಂಡಿದ್ದು. ಈ ತಿದ್ದುಪಡಿ ಅಸಂವಿಧಾನಿಕ ಎಂದು ಹೇಳಿದ ಹೈಕೋರ್ಟ್ 128 ಎ ತಿದ್ದುಪಡಿ ರದ್ದುಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular