HomeKarnatakaಸಂತ್ರಸ್ತೆಯನ್ನೇ ಮದುವೆಯಾದ ಆರೋಪಿ: ಪೋಕ್ಸೊ ಕೇಸ್ ರದ್ದುಪಡಿಸಿದ ಹೈಕೋರ್ಟ್

ಸಂತ್ರಸ್ತೆಯನ್ನೇ ಮದುವೆಯಾದ ಆರೋಪಿ: ಪೋಕ್ಸೊ ಕೇಸ್ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಆರೋಪಿ ಮದುವೆಯಾಗಿದ್ದು, ದಂಪತಿಗೆ ಮಗುವಾದ ಹಿನ್ನೆಲೆಯಲ್ಲಿ ಆರೋಪಿ ಮೇಲಿನ ಪೋಕ್ಸೊ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಮಂಡ್ಯದ ಅರಕೆರೆಯ 27 ವರ್ಷದ ಯುವಕ ತನ್ನ ವಿರುದ್ಧ ಕ್ರಿಮಿನಲ್ ಪ್ರಕರಣ ರದ್ದು ಮಾಡಬೇಕೆಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಪೋಕ್ಸೊ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂತ್ರಸ್ತೆ ಈಗಾಗಲೇ ವಯಸ್ಕಳಾಗಿದ್ದು, ಸ್ವಂತ ನಿರ್ಧಾರ ಕೈಗೊಳ್ಳಲು ಮತ್ತು ಜೀವನದ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ. ಆರೋಪಿಯನ್ನೇ ಆಕೆ ಮದುವೆಯಾಗಿ ಮಗು ಪಡೆದಿದ್ದಾಳೆ. ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಆಕೆಯ ಸಮ್ಮತಿ ಇದೆ. ಸಂತ್ರಸ್ತೆ ಮತ್ತು ಮಗುವಿನ ಭವಿಷ್ಯದ ದೃಷ್ಟಿಯಿಂದ ಅರ್ಜಿದಾರನ ಮೇಲಿನ ಪೋಕ್ಸೊ ಪ್ರಕರಣ ರದ್ದುಪಡಿಸುವುದು ಸೂಕ್ತ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದ್ದು, ಆರೋಪಿ ಮೇಲಿನ ಪೋಕ್ಸೊ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular