HomeKarnatakaಮೂಡಬಿದಿರೆ ಇನ್ ಸ್ಪೆಕ್ಟರ್ ಪಿ.ಜಿ. ಸಂದೇಶ್ ವಿರುದ್ಧದ ಅತ್ಯಾಚಾರ ಪ್ರಕರಣ ರದ್ಧತಿಗೆ ಹೈಕೋರ್ಟ್ ನಕಾರ

ಮೂಡಬಿದಿರೆ ಇನ್ ಸ್ಪೆಕ್ಟರ್ ಪಿ.ಜಿ. ಸಂದೇಶ್ ವಿರುದ್ಧದ ಅತ್ಯಾಚಾರ ಪ್ರಕರಣ ರದ್ಧತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಅಮಾನತುಗೊಂಡಿರುವ ಇನ್ ಸ್ಪೆಕ್ಟರ್ ಪಿ.ಜಿ. ಸಂದೇಶ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಸಂದೇಶ್, ಸ್ಮಿತಾ ಪೂರ್ಣಿಮಾ ಆರ್. ಮಲ್ಯ ಮತ್ತು ಸುನಿತಾ ಲೋಬೋ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ನಡೆದಿದೆ.

ವಿಚಾರಣೆಯ ವೇಳೆ ಅರ್ಜಿದಾರರ ಪರ ವಕೀಲ ಎಂ.ಆರ್. ಬಾಲಕೃಷ್ಣ ದೂರುದಾರ ಮಹಿಳೆ 2022ರ ನವೆಂಬರ್ ನಿಂದ 2023ರ ಜೂನ್ ನಡುವೆ ಅತ್ಯಾಚಾರ ನಡೆದಿದೆ ಎಂದಿದ್ದಾರೆ. ಆದರೆ ಪ್ರಕರಣ 2026ರ ಮಾರ್ಚ್ 21ರಂದು ದಾಖಲಿಸಲಾಗಿದೆ. ಘಟನೆ ನಡೆದ ಮೂರು ವರ್ಷ ನಂತರ ಪ್ರಕರಣ ದಾಖಲಿಸಲಾಗಿದೆ. ಸಂದೇಶ್ ಅವರನ್ನು ಸಿಲುಕಿಸಲು ಈ ಪಿತೂರಿ ನಡೆಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂತ್ರಸ್ತೆ ಪರ ವಕೀಲರು, ಅರ್ಜಿದಾರರು ಸಂತ್ರಸ್ತೆ ಜೊತೆ ಮಾತನಾಡಿರುವ 800ಕ್ಕೂ ಹೆಚ್ಚು ಮೊಬೈಲ್ ಫೋನ್ ಆಡಿಯೋ ರೆಕಾರ್ಡಿಂಗ್ ಇದೆ. ಸಂತ್ರಸ್ತೆ ಈಗಾಗಲೇ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಅಲ್ಲದೇ ಸಂದೇಶ್ ವಿರುದ್ಧ ಇನ್ನೂ ಎರಡು ಮೂರು ಪ್ರಕರಣ ದಾಖಲಾಗಿದ್ದು, ಸಿಐಡಿ ತನಿಖೆಗೆ ವಹಿಸಲಾಗಿದೆ. ಎರಡು ಮತ್ತು ಮೂರನೇ ಆರೋಪಿಗಳು ಸಂದೇಶ್ ಪರವಾಗಿ ಸಂತ್ರಸ್ತೆಗೆ ದೂರು ಮುಂದುವರೆಸಬಾರದು ಎಂದು ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ.

ಇದಕ್ಕೆ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್. ಜಗದೀಶ್, ಅರ್ಜಿದಾರ ಸಂದೇಶ್ ಪೊಲೀಸ್ ಅಧಿಕಾರಿ. ಅವರ ವಿರುದ್ಧ ಸಂತ್ರಸ್ತೆ ನೀಡಿರುವ ಹೇಳಿಕೆ ಇದೆ. ಹಾಗಾಗಿ ತನಿಖೆ ನಡೆಯಬೇಕು ಎಂದು ಹೇಳಿದ್ದಾರೆ.

ಇದನ್ನು ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ತಡೆ ಅಥವಾ ರದ್ದುಪಡಿಸಲು ಸ್ಪಷ್ಟವಾಗಿ ನಿರಾಕರಿಸಿದೆ. ಸಂದೇಶ್ ಪರ ವಕೀಲರು ಅರ್ಜಿ ಹಿಂಪಡೆಯುವುದಾಗಿ ನ್ಯಾಯ ಪೀಠಕ್ಕೆ ತಿಳಿಸಿದ್ದು, ಇದನ್ನು ಪರಿಗಣಿಸಿದ ಹೈಕೋರ್ಟ್ ಅರ್ಜಿದಾರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಆದರೆ ಅದನ್ನು ಪ್ರಶ್ನಿಸಿ ಇದೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯವನ್ನು ಅರ್ಜಿದಾರರು ಹೊಂದಿದ್ದಾರೆ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಅತ್ಯಾಚಾರ ಆರೋಪದಲ್ಲಿ ಸಂತ್ರಸ್ತ ಶಿಕ್ಷಕಿ ನೀಡಿದ ದೂರಿನ ಅನ್ವಯ ಬೆಳ್ತಂಗಡಿ ತಾಲೂಕಿನ ವೇಣೂರು ಪೋಲೀಸ್ ಠಾಣೆಯಲ್ಲಿ ಸಂದೇಶ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular