ಮುಸ್ಲಿಂ ಮಹಿಳೆಯರ ಬಗ್ಗೆ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದೆ.

ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಭಾಕರ್ ಭಟ್ ಅವರ ವಿರುದ್ಧ ದೂರು ದಾಖಲಾಗಿದೆ. ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಪ್ರಭಾಕರ್ ಭಟ್ ಅರ್ಜಿ ಸಲ್ಲಿಸಿದ್ದಾರೆ. ರಾಜಕೀಯ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದು, ಇದನ್ನು ರದ್ದುಗೊಳಿಸಬೇಕು ಎಂದು ಪ್ರಭಾಕರ್ ಭಟ್ ಅವರ ಪರ ವಕೀಲರಾದ ಅರುಣ್ ಶ್ಯಾಮ್ ಮನವಿ ಮಾಡಿದ್ದಾರೆ.

ವಾದ ಆಲಿಸಿದ ನ್ಯಾಯಮೂರ್ತಿ ರಾಜೇಶ್ ರೈ ಅವರು, ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಸರ್ಕಾರದ ಪರ ಎಸ್‍ಪಿಪಿಗೆ ಸೂಚನೆ ನೀಡಿದ್ದು, ಇದರೊಂದಿಗೆ ಪ್ರಭಾಕರ ಭಟ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read