ಬೆಂಗಳೂರು: ಮದ್ಯದ ವಾಸನೆ ಆಧರಿಸಿ ವ್ಯಕ್ತಿ ಅಮಲಿನಲ್ಲಿದ್ದ ಎನ್ನಲಾಗದು ಎಂದು ಹೇಳಿರುವ ಹೈಕೋರ್ಟ್ ಪರಿಹಾರ ತಿರಸ್ಕರಿಸಿದ್ದ ಆದೇಶ ರದ್ದುಗೊಳಿಸಿ ತೀರ್ಪು ನೀಡಿದೆ.
ಕರುಳಿನಲ್ಲಿದ್ದ ಅಂಶಗಳಿಂದ ಮದ್ಯದ ವಾಸನೆ ಬರುತ್ತಿತ್ತು ಎಂದು ಶವ ಪರೀಕ್ಷೆ ವರದಿ ಪರಿಗಣಿಸಿ ಅಪಘಾತದಲ್ಲಿ ಮೃತಪಟ್ಟಿದ್ದ ಲಾರಿ ಚಾಲಕ ಮದ್ಯದ ಅಮಲಿನಲ್ಲಿದ್ದ ಎಂದು ತೀರ್ಮಾನಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಅಪಘಾತ ಪ್ರಕರಣವೊಂದರಲ್ಲಿ ಲಾರಿ ಚಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಮೃತನ ಪತ್ನಿ ಮತ್ತು ಮಕ್ಕಳು ಪರಿಹಾರ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ್ದ ಮೋಟಾರ್ ವಾಹನ ಅಪಘಾತ ನ್ಯಾಯಮಂಡಳಿ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ರವಿ ವಿ. ಹೊಸಮನಿ ಅವರ ಪೀಠ ಮದ್ಯದ ವಾಸನೆ ಆಧರಿಸಿ ವ್ಯಕ್ತಿ ಅಮಲಿನಲ್ಲಿದ್ದ ಎನ್ನಲಾಗದು ಎಂದು ಅಭಿಪ್ರಾಯಪಟ್ಟಿದೆ.
ಮದ್ಯ ಸೇವನೆ ಮಾಡಿರುವುದು ಮತ್ತು ಮದ್ಯದ ಅಮಲಿನಲ್ಲಿರುವುದು ಸಂಪೂರ್ಣ ಭಿನ್ನವಾದ ವಿಚಾರಗಳಾಗಿವೆ. ನ್ಯಾಯಮಂಡಳಿ ಕೇವಲ ಶವ ಪರೀಕ್ಷೆ ವರದಿ ಆಧಾರದ ಮೇಲೆ ಅಪಘಾತದ ಸಂದರ್ಭದಲ್ಲಿ ಚಾಲಕ ಮದ್ಯದ ಅಮಲಿನಲ್ಲಿದ್ದ ಎಂದು ನಿರ್ಧಾರ ಕೈಗೊಂಡಿದೆ. ಆದರೆ, ಅಪಘಾತಕ್ಕೆ ಯಾವುದೇ ಪ್ರತ್ಯಕ್ಷ ಸಾಕ್ಷಿಯನ್ನು ವಿಚಾರಣೆಗೆ ಒಳಪಡಿಸಲು ಅರ್ಧ ಜೀರ್ಣಗೊಂಡ ಆಹಾರ ಹುದುಗುವಿಕೆಯ ಪರಿಣಾಮವಾಗಿ ಮದ್ಯದ ವಾಸನೆ ನೀಡುವುದು ಅಸಾಮಾನ್ಯ. ಕೇವಲ ಮದ್ಯದ ವಾಸನೆ ಆಧರಿಸಿ ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿದ್ದ ಎಂದು ಊಹಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ. ಪರಿಹಾರ ತಿರಸ್ಕರಿಸಿದ್ದ ಮೋಟಾರ್ ವಾಹನ ಅಪಘಾತ ನ್ಯಾಯ ಮಂಡಳಿ ಆದೇಶ ರದ್ದುಗೊಳಿಸಿದ ರವಿ ವಿ. ಹೊಸಮನಿ ಅವರ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಕರಾಮುವಿ ಪ್ರವೇಶಾತಿ ಅವಧಿ ವಿಸ್ತರಣೆ
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2026-27 ನೇ ಸಾಲಿನ ಜುಲೈ ಆವೃತ್ತಿಯ ಸ್ನಾತಕ ಕೋರ್ಸುಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್‌ಡಬ್ಲ್ಯೂ., ಬಿ.ಎಸ್ಸಿ., ಬಿ.ಲಿಬ್.ಐ.ಎಸ್ಸಿ. ಸೇರಿದಂತೆ ವಿವಿಧ ಸ್ನಾತಕ ಕೋರ್ಸುಗಳು ಹಾಗೂ ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್‌ಡಬ್ಲ್ಯೂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ ಹಾಗೂ ಸೇರಿದಂತೆ ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶ ಪಡೆಯಬಹುದಾಗಿದೆ.
ಪಿಜಿ ಡಿಪ್ಲೊಮಾ, ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸುಗಳ ಪ್ರವೇಶಾತಿ ಅವಧಿಯನ್ನು ಅಕ್ಟೋಬರ್ 13 ವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಬೆಂಗಳೂರು ಪ್ರಾದೇಶಿಕ ನಿರ್ದೇಶಕರು , ಬೆಂಗಳೂರು ಪ್ರಾದೇಶಿಕ ಕೇಂದ್ರ -01 ,ಮೊದಲನೇ ಮಹಡಿ, ಕೆ.ಎಸ್. ಆರ್ ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು ಇಲ್ಲಿ ಭೇಟಿ ನೀಡಿ ಪ್ರವೇಶಾತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.in ಅಥವಾ ಬೆಂಗಳೂರು ಪ್ರಾದೇಶಿಕ ಕೇಂದ್ರದ ದೂರವಾಣಿ ಸಂಖ್ಯೆ 080-26603664, 98805-26439, 90195-26439 ಅನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

