ಶಾಲೆಗಳು ವ್ಯವಹಾರ ಕೇಂದ್ರಗಳಲ್ಲ: ಮೈದಾನ, ಕೊಠಡಿ, ಅಗ್ನಿ ಸುರಕ್ಷತೆ ವಿನಾಯಿತಿ ಕೋರಿದ ಶಾಲೆಗೆ ಹೈಕೋರ್ಟ್ ಚಾಟಿ

ಬೆಂಗಳೂರು: ಕೊಠಡಿ, ಆಟದ ಮೈದಾನ, ಗ್ರಂಥಾಲಯ, ಪ್ರಯೋಗಾಲಯ, ಅಗ್ನಿ ಸುರಕ್ಷತಾ ಕ್ರಮಗಳಿಲ್ಲದ ಶಾಲೆಯನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ ಖಾಸಗಿ ಶಾಲೆಗಳನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಶಾಲೆಗಳು ವ್ಯವಹಾರ ಕೇಂದ್ರಗಳೆಲ್ಲ ಎಂದು ಹೇಳಿದೆ.

ಶಾಲೆಗಳನ್ನು ವ್ಯವಹಾರ ಕೇಂದ್ರವನ್ನಾಗಿಸಲು ಸಾಧ್ಯವಿಲ್ಲ. ಅಗ್ನಿ ಸುರಕ್ಷತೆ ಪ್ರಮಾಣ ಪತ್ರ ಪಡೆಯದೆ ಶಾಲೆ ನಡೆಸಿ ಅಪ್ರಾಪ್ತ ಮಕ್ಕಳ ಜೀವದ ಜೊತೆಗೆ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಖಾಸಗಿ ಶಾಲೆ ಸಲ್ಲಿಸಿದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಹೈಕೋರ್ಟ್ ವಿಭಾಗಿಯ ಪೀಠ ಅರ್ಜಿದಾರ ಶಾಲೆಗಳನ್ನು ತರಾಟೆಗೆ ತೆಗೆದುಕೊಂಡಿದೆ.

ಶಾಲೆಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳಿಲ್ಲದ ಕಾರಣ ಮೇಲ್ದರ್ಜೆಗೇರಿಸಲು ಸರ್ಕಾರ ಅನುಮತಿ ನೀಡಿಲ್ಲ ಎಂದು ಹೇಳಿ ಅರ್ಜಿ ಇತ್ಯರ್ಥಪಡಿಸಿದೆ.

ಅರ್ಜಿದಾರ ಶಾಲೆಗಳ ನಡೆ ಬಗ್ಗೆ ಆಕ್ಷೇಪಿಸಿದ ಹೈಕೋರ್ಟ್, ಶಾಲಾ ಕಟ್ಟಡ ಇದ್ದರೂ ಮಕ್ಕಳಿಗೆ ಸರಿಯಾದ ಕೊಠಡಿ ವ್ಯವಸ್ಥೆ ಇಲ್ಲ, ಆಟದ ಮೈದಾನ, ಗ್ರಂಥಾಲಯ, ಅಗ್ನಿ ಸುರಕ್ಷತಾ ಕ್ರಮಗಳು ಇಲ್ಲ. ನಿರಾಕ್ಷೇಪಣಾ ಪತ್ರ ಪಡೆದುಕೊಂಡಿಲ್ಲ. ಇಂತಹ ಸಂದರ್ಭದಲ್ಲಿ ಶಾಲೆ ನಡೆಸಲು ಅಥವಾ ಮೇಲ್ದರ್ಜೆಗೇರಿಸಲು ಅನುಮತಿ ನೀಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read